ಜ.19ರಂದು ವಚನ ಸಾಹಿತ್ಯ ಸಮ್ಮೇಳನ: ಭರದ ಸಿದ್ಧತೆಜ.19ರಂದು ಹಮ್ಮಿಕೊಂಡಿರುವ ಒಂದು ದಿನದ ಕಲಬುರಗಿ ಜಿಲ್ಲಾ ಪ್ರಥಮ ವಚನ ಸಾಹಿತ್ಯ ಸಮ್ಮೇಳನವನ್ನು ಅನುಭವ ಮಂಟಪದ ರೀತಿಯಲ್ಲಿ ಅರ್ಥಪೂರ್ಣವಾಗಿ ನಡೆಸಲು ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಮ್ಮೇಳನಾಧ್ಯಕ್ಷರಾಗಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ನಿರ್ದೇಶಕಿ, ಹಿರಿಯ ಸಾಹಿತಿ ಡಾ. ನೀಲಾಂಬಿಕಾ ಪೊಲೀಸ್ ಪಾಟೀಲರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹಾಗೂ ಸ್ವಾಗತ ಸಮಿತಿ ಅಧ್ಯಕ್ಷ ಸುರೇಶ ಆರ್. ಸಜ್ಜನ್ ತಿಳಿಸಿದರು.