ಕೆಂಬಾಳೆ, ತೊಗರಿ, ಸಿರಿಧಾನ್ಯಗಳಿಗೆ ಮಾರುಕಟ್ಟೆ ಕಲ್ಪಿಸಿ: ಪ್ರಿಯಾಂಕ್ ಖರ್ಗೆಕಲಬುರಗಿಯ ಕಮಲಾಪೂರದಲ್ಲಿ ಬೆಳೆಯುವ ಕೆಂಬಾಳೆ, ಏಶಿಯಾದಲ್ಲಿಯೆ ಗುಣಮಟ್ಟದಿಂದ ಕೂಡಿರುವ ಇಲ್ಲಿ ಬೆಳೆಯುವ ತೊಗರಿ, ಸಿರಿಧಾನ್ಯ ಸೇರಿದಂತೆ ಕೃಷಿ, ತೋಟಗಾರಿಕೆ ಉತ್ಪನ್ನಗಳ ಮಾರುಕಟ್ಟೆಗೆ ಸೂಕ್ತ ವೇದಿಕೆ ಮತ್ತು ಬ್ಯಾಂಡಿಂಗ್ ಗೆ ಎಕ್ಸಿಲೆನ್ಸ್ ಸೆಂಟರ್ ಸ್ಥಾಪನೆಗೆ ಮುಂದಾಗಿ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.