ಎಸ್ಸೆಸ್ಸೆಲ್ಸಿ ಪರೀಕ್ಷೆ ಜೀವನದ ಬುನಾದಿ: ಬಿ.ಫೌಜಿಯಾ ತರನ್ನುಮ್ಕಲಬುರಗಿ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಶ ಸುಧಾರಣೆಗೆ 100 ದಿನಗಳ ಕ್ರಿಯಾ ಯೋಜನೆ ರೂಪಿಸಿದ್ದು, ಇದೀಗ ಉಳಿದಿರುವುದು 75 ದಿನ ಮಾತ್ರ. ಪ್ರತಿ ದಿನ ಪ್ರತಿ ಕ್ಷಣ ತುಂಬಾ ಉಪಯುಕ್ತವಾಗಿ ಬಳಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ ಜಿಲ್ಲಾಧಿಕಾರಿಗಳು, ನೀವು ಉತ್ತಮ ರ್‍ಯಾಂಕ್ ಪಡೆಯುವುದರ ಜೊತೆಗೆ ಜಿಲ್ಲೆಯ ರ‌್ಯಾಂಕ್ ಸಹ ಅಗ್ರದಲ್ಲಿ ಬರುವಂತೆ ಮಾಡಬೇಕು ಎಂದು ಕರೆ ನೀಡಿದರು.