ಕೋಲಿ ಸಮಾಜದ ಒಳಿತಿಗೆ ಸ್ಥಾನಮಾನ ತ್ಯಜಿಸಲು ಸಿದ್ಧ: ತಿಪ್ಪಣ್ಣಪ್ಪ ಕಮಕನೂರಕೋಲಿ ಸಮಾಜ ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದಿದೆ ಎಂದು ಚಿನ್ನಪ್ಪ ರೆಡ್ಡಿ ಆಯೋಗದ ವರದಿಯಲ್ಲಿದೆ. ಆದರೆ, ಇದುವರೆಗೂ ಈ ಸಮಾಜ ಎಸ್‍ಟಿಗೆ ಸೇರ್ಪಡೆ ಆಗಿಲ್ಲ, ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಚರ್ಚಿಸಿದ್ದು, ಶೀಘ್ರದಲ್ಲಿ ಕೇಂದ್ರಕ್ಕೆ ಪ್ರಸ್ತಾವ ಕಳುಹಿಸುವ ಭರವಸೆ ರಾಜ್ಯ ಸರ್ಕಾರದಿಂದ ದೊರಕಿದೆ ಎಂದು ಕೋಲಿ ಸಮಾಜದ ಮುಖಂಡ ತಿಪ್ಪಣ್ಣಪ್ಪ ಕಮಕನೂರ ಹೇಳಿದ್ದಾರೆ.