ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದ ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿವಿ ಕ್ಯಾಂಪಸ್‌ಲ್ಲಿ ಊಟದ ಹೊತ್ತಲ್ಲಿ ಹೆಚ್ಚಿನ ಚಪಾತಿಗಳನ್ನು ಕೆಲವರು ಕೊಂಡೊಯ್ದರೆಂಬ ಕಾರಣಕ್ಕಾಗಿ ವಿದ್ಯಾರ್ಥಿಗಳ 2 ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.
ಪೊಲೀಸ್ ಸರ್ಪಗಾವಲಿನಲ್ಲಿ ಜಿಲ್ಲೆಯ ಆಳಂದ ಪಟ್ಟಣದ ಲಾಡ್ಲೇ ಮಶಾಕ್ ದರ್ಗಾದಲ್ಲಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಶಿವರಾತ್ರಿ ದಿನ ಬುಧವಾರ ಪೂಜೆ ಸಲ್ಲಿಸಲಾಯಿತು.
ಹೆರಿಗೆ ವೇಳೆ ಮಹಿಳೆಯೊಬ್ಬರಿಗೆ ವೈದರು ಹೊಟ್ಟೆಯಲ್ಲಿ ಹತ್ತಿ ಉಂಡೆ, ಬಟ್ಟೆಯಿಟ್ಟು ಹೊಲಿಗೆ ಹಾಕಿದ ಘಟನೆ ಇತ್ತಿಚೆಗಷ್ಟೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದಿತ್ತು.
ಸಿಮೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಹೃದಯಾಘತದಿಂದ ಮೃತಪಟ್ಟಿದ್ದು, ಅವರ ಶವವನ್ನು ಕಾರ್ಖಾನೆಯ ಸಿಬ್ಬಂದಿ ಅಮಾನವೀಯವಾಗಿ ಎಳೆದೊಯ್ದ ಘಟನೆ ಕಲಬುರಗಿ ಜಿಲ್ಲೆಯ ಕಾರ್ಖಾನೆಯಲ್ಲಿ ನಡೆದಿದ್ದು, ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.