ನೀತಿ ಆಯೋಗದ ಡೆಲ್ಟಾ ರ್ಯಾಂಕ್ನಲ್ಲಿ ಕಾಳಗಿ ತಾಲೂಕುಶಿಕ್ಷಣ, ಆರೋಗ್ಯ, ಕೌಶಲ್ಯ, ಮಹಿಳಾ ಮತ್ತು ಮಕ್ಕಳ, ಕೃಷಿ ಸೇರಿದಂತೆ ಜನರ ಜೀವನ ಮಟ್ಟದ ಸುಧಾರಣೆ ನಿಟ್ಟಿನಲ್ಲಿ ಮಹತ್ವಾಕಾಂಕ್ಷೆಯ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವ ತಾಲೂಕುಗಳಿಗೆ ಇತ್ತೀಚೆಗೆ ನೀತಿ ಆಯೋಗವು ಡೆಲ್ಟಾರ್ಯಾಂಕ್- 2024 ಘೋಷಿಸಿದ್ದು, ದಕ್ಷಿಣ ಭಾರತ ವಲಯದಡಿ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕು ಎರಡನೇ ರ್ಯಾಂಕ್ ಪಡೆಯಲು ಯಶಸ್ವಿಯಾಗಿದೆ.