ಪ್ರಜಾಪ್ರಭುತ್ವದ ಯಶಸ್ಸಿಗೆ ಪತ್ರಿಕಾ ಸ್ವಾತಂತ್ರ ಅಗತ್ಯ: ಸಚಿವ ಶರಣಪ್ರಕಾಶ ಪಾಟೀಲ್ಪತ್ರಕರ್ತರು ತಪ್ಪುಗಳ್ನು ಸರಿಪಡಿಸುವುದರ ಜತೆಗೆ ಸಮಾಜದ ಅಭಿವೃದ್ಧಿ, ಏಳ್ಗೆಯ ಬಗ್ಗೆಯೂ ಗಮನಹರಿಸುವ ಕೆಲಸ ಮಾಡಬೇಕು. ಪತ್ರಕರ್ತರ ಪೆನ್ನಿಗೆ ಬಹಳಷ್ಟು ಶಕ್ತಿ ಇದೆ. ಸಮಾಜದಲ್ಲಿನ ಜನಸಾಮಾನ್ಯರ ಆಗು-ಹೋಗುಗಳು ಸೇರಿದಂತೆ ಪ್ರತಿಯೊಂದು ಆಯಾಮಗಳನ್ನು ರಚನಾತ್ಮಕವಾಗಿ ರಚಿಸಿ, ಅವರುಗಳ ಆಶೋತ್ತರಗಳಿಗೆ ಸ್ಪಂದಿಸುವ ಕೊಂಡಿಯ ರೀತಿಯಲ್ಲಿ ಮಾಧ್ಯಮಗಳು ಕೆಲಸ ಮಾಡುತ್ತಿವೆ.