ಕಲಬುರಗಿ: ಇಂದಿನಿಂದ ಸಾವಯವ ಕೃಷಿ ಜಾತ್ರೆಎಪಿಎಂಸಿಯಲ್ಲಿ ಭರದ ಸಿದ್ಧತೆ ನಡೆದಿದ್ದು, ಕೆಕೆಸಿಸಿಐ ನೇತೃತ್ವದಲ್ಲಿ 3 ದಿನ ಜಾತ್ರೆ ನಡೆಯಲಿದೆ. ಸುಮಾರು 1 ಲಕ್ಷಕ್ಕೂ ಹೆಚ್ಚು ರೈತರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸಂಜೆ 5 ಗಂಟೆಗೆ ಕೃಷಿಯಲ್ಲಿ ವಿನೂತನ ಆವಿಷ್ಕಾರ ಮಾಡಿದ ರೈತರಿಗೆ ಪ್ರಶಸ್ತಿ ವಿತರಣೆ ಹಾಗೂ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಜಾತ್ರೆಯಲ್ಲಿ ಸಾಕು ನಾಯಿ, ಬೆಕ್ಕು, ಕುದುರೆ ಹಾಗೂ ಜಾನುವಾರುಗಳ ಪ್ರದರ್ಶನ ಏರ್ಪಡಿಸಲಾಗಿದೆ.