ಕಲಬುರಗಿ ಜಿಲ್ಲೆಯಲ್ಲಿ ಅತೀ ಮಳೆ ಸುರಿದರೂ ಮನೆ ಬಿದ್ದಿಲ್ಲವೆ?ಮಳೆಗಾಲ ಆರಂಭವಾಗಿ ಅತೀ ಮಳೆ ಸುರಿಯುತ್ತಿದ್ದರೂ ಈವರೆಗೆ ಯಾವುದೇ ಇಲಾಖೆಯಿಂದ ಮಳೆಯಿಂದ ಹಾನಿಯಾದ ರಸ್ತೆ, ಅಂಗನವಾಡಿ, ಶಾಲಾ, ವಿದ್ಯುತ್ ಕಂಬಗಳ ದುರಸ್ತಿ ಬಗ್ಗೆ ಪ್ರಸ್ತಾವನೆ ಬಂದಿಲ್ಲ. ಹಾಗಾದರೆ ಜಿಲ್ಲೆಯಲ್ಲಿ ಎಲ್ಲಿಯೂ ಏನು ಸಮಸ್ಯೆ ಇಲ್ಲವಾ ಎಂದು ಅಧಿಕಾರಿಗಳಿಗೆ ಡಿಸಿ. ಬಿ. ಫೌಜಿಯಾ ತರನ್ನುಮ್ ಅವರು ಖಾರವಗಿಯೇ ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡ ಪ್ರಸಂಗ ವಿಪತ್ತು ನಿರ್ವಹಣಾ ಸಭೆಯಲ್ಲಿ ನಡೆಯಿತು.