ಕಲಬುರಗಿ: ಸರ್ವಜ್ಞ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ

| Published : Feb 13 2024, 12:49 AM IST

ಸಾರಾಂಶ

ಸರ್ವಜ್ಞ ಶಿಕ್ಷಣ ಸಂಸ್ಥೆಯಲ್ಲಿ ಪಠ್ಯದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬಿತ್ತುವ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಮಕ್ಕಳಿಗೆ ವಿಶೇಷ ಕಾಳಜಿ ಮಾಡುವ ಸಂಸ್ಥೆಯಾಗಿದೆ ಎಂದು ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪೂರ ಹೇಳಿದರು.

ಕನ್ನಡಪ್ರಭ ವಾರ್ತೆ ಕಲಬುರಗಿ

ಸರ್ವಜ್ಞ ಶಿಕ್ಷಣ ಸಂಸ್ಥೆಯಲ್ಲಿ ಪಠ್ಯದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬಿತ್ತುವ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಮಕ್ಕಳಿಗೆ ವಿಶೇಷ ಕಾಳಜಿ ಮಾಡುವ ಸಂಸ್ಥೆಯಾಗಿದೆ ಎಂದು ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪೂರ ಹೇಳಿದರು.

ನಗರದ ಸರ್ವಜ್ಞ ಮತ್ತು ಜಸ್ಟಿಸ್ ಶಿವರಾಜ ಪಾಟೀಲ ಪಪೂ ವಿಜ್ಞಾನ ಮಹಾವಿದ್ಯಾಲಯ ಹಾಗೂ ಸರ್ವಜ್ಞ ಚಿಣ್ಣರ ಲೋಕ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ “ವಾರ್ಷಿಕ ಸ್ನೇಹ ಸಮ್ಮೇಳನ–2024” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣ ಸಂಸ್ಥೆ ಕಟ್ಟುವದು ಮತ್ತು ಅದನ್ನು ನಡೆಸುವದು ಕಷ್ಟದ ಕೆಲಸ, ಆದರೆ ಸಂಸ್ಥೆಯವರು ಕಷ್ಟಪಟ್ಟು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಒತ್ತುಕೊಟ್ಟು ಯಶಸ್ವಿಯಾಗಿ ಗುಣಮಟ್ಟದ ಶಿಕ್ಷಣ ಕೊಡುತ್ತಿದ್ದಾರೆ. ಸರ್ವಜ್ಞ ಶಿಕ್ಷಣ ಸಂಸ್ಥೆಯಲ್ಲಿ ಸಾಕಷ್ಟು ಕನ್ನಡ ಮಾಧ್ಯಮದ, ಗ್ರಾಮೀಣ ಭಾಗದ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ವಸತಿ ಸಹಿತ ಉಚಿತ ಶಿಕ್ಷಣ ಪಡೆದು ಉನ್ನತ ಸ್ಥಾನದಲ್ಲಿರುವುದು ನಿಜಕ್ಕೂ ಸಂತೋಷದ ವಿಷಯ ಎಂದರು.

ನಾಡೋಜ ಡಾ. ಪಿ.ಎಸ್. ಶಂಕರ ಮಾತನಾಡಿ, ಕಲಬುರಗಿಯಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ವಿವಿಧ ವೈದ್ಯರಿದ್ದಾರೆ, ಅವರಿಗೆ ಎಲ್ಲಿಂದ ರೋಗಿಗಳು ಬರಬೇಕು? ಎನ್ನುತ್ತಾ ಕಲ್ಯಾಣ ಕರ್ನಾಟಕ ಭಾಗದಲ್ಲಿಯೇ ಇಂತಹ ಉತ್ತಮ ಸಂಸ್ಥೆಗಳಿವೆ. ಇವುಗಳನ್ನು ಬಿಟ್ಟು ಕೋಟಾದಂತಹ ಮಂಗಳೂರಿನಂತಹ ಕೋಚಿಂಗ್ ಸೆಂಟರ್‌ಗೆ ಹೋಗಿ ಒತ್ತಡಕ್ಕೆ ಒಳಗಾಗಿ ಖಿನ್ನತೆಗೆ ವಿದ್ಯಾರ್ಥಿಗಳು ಒಳಗಾಗುತ್ತಿದ್ದಾರೆಂದರು.

ಸರ್ವಜ್ಞ ಶಿಕ್ಷಣ ಸಂಸ್ಥೆಗಳ ಪ್ರೊ. ಚೆನ್ನಾರಡ್ಡಿ ಪಾಟೀಲ ವಂದಿಸಿದರು. ಸಂಗೀತಾ ಪಾಟೀಲ ಸ್ವಾಗತಿಸಿದರು. ಎಸ್.ಎಂ.ರಡ್ಡಿ ಜಿಲ್ಲಾ ನ್ಯಾಯಾಧೀಶರು (ನಿವೃತ್ತ), ಗೀತಾ ಪಾಟೀಲ, ಅಭಿಷೇಕ್ ಪಾಟೀಲ, ಎಂ.ಸಿ.ಕಿರೇದಳ್ಳಿ, ಪ್ರಭುಗೌಡ ಸಿದ್ಧಾರಡ್ಡಿ, ವಿಜಯಕುಮಾರ ನಾಲವಾರ, ಸಿದ್ರಾಮಪ್ಪಗೌಡ, ಅಯ್ಯಣ್ಣಗೌಡ ಪಾಟೀಲ, ಡಾ. ಬಸವರಾಜ ಪಾಟೀಲ, ಕರುಣೇಶ್ ಹಿರೇಮಠ, ಗುರುರಾಜ ಕುಲಕರ್ಣಿ ಉಪಸ್ಥಿತರಿದ್ದರು. ಪಾಲಕರಿಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಮನರಂಜಿಸಿದವು.