ಸಾರಾಂಶ
ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳನ್ನು ಪ್ರಯಾಣಿಕರ ಅನುಕೂಲಕ್ಕಾಗಿ ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಗೆ ಅವಕಾಶ ಕಲ್ಪಿಸಲಾಗುವುದು ಎಂದು ದಕ್ಷಿಣ ಮಧ್ಯ ರೈಲ್ವೆತಿಳಿಸಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳನ್ನು ಪ್ರಯಾಣಿಕರ ಅನುಕೂಲಕ್ಕಾಗಿ ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಗೆ ಅವಕಾಶ ಕಲ್ಪಿಸಲಾಗುವುದು ಎಂದು ದಕ್ಷಿಣ ಮಧ್ಯ ರೈಲ್ವೆತಿಳಿಸಿದೆ.ಆಗಸ್ಟ್ 3 ರಿಂದ ಸರ್ ಎಂ ವಿಶ್ವೇಶ್ವರಯ್ಯ ನಿಲ್ದಾಣ ಬೆಂಗಳೂರು -ಕಲಬುರಗಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು (22232) ಯಾದಗಿರಿ ನಿಲ್ದಾಣಕ್ಕೆ ರಾತ್ರಿ 9:44 ಗಂಟೆಗೆ ಆಗಮಿಸಿ, 9:45 ಕ್ಕೆ ಹೊರಡಲಿದೆ. ಆಗಸ್ಟ್ 4 ರಿಂದ ಕಲಬುರಗಿ - ಸರ್ ಎಂ ವಿಶ್ವೇಶ್ವರಯ್ಯ ನಿಲ್ದಾಣ ಬೆಂಗಳೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು (22231) ಯಾದಗಿರಿ ನಿಲ್ದಾಣಕ್ಕೆ ಬೆಳಗ್ಗೆ 5:54ಕ್ಕೆ ಬಂದು, 5:55 ಕ್ಕೆ ಹೊರಡಲಿದೆ ಎಂದು ಪ್ರಕಟಣೆ ತಿಳಿಸಿದೆ.