29ರಂದು ಕಲಬುರಗಿ ತಾಲೂಕು ಕಸಾಪ ಸಮ್ಮೇಳನ

| Published : Aug 26 2024, 01:30 AM IST

ಸಾರಾಂಶ

ಕಲಬುರಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಆ.29ರಂದು ನಗರದ ಕನ್ನಡ ಭವನದ ಆವರಣದಲ್ಲಿ ಹಮ್ಮಿಕೊಂಡಿರುವ ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ಮತ್ತು ಪ್ರಚಾರದ ಕರಪತ್ರಗಳನ್ನು ಕನ್ನಡ ಭವನದಲ್ಲಿ ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಬಿಡುಗಡೆಗೊಳಿಸಿದರು.

ಕನ್ನಡಪ್ರಭ ವಾರ್ತೆ ಕಲಬುರಗಿ

ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಆ.29ರಂದು ನಗರದ ಕನ್ನಡ ಭವನದ ಆವರಣದಲ್ಲಿ ಹಮ್ಮಿಕೊಂಡಿರುವ ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ಮತ್ತು ಪ್ರಚಾರದ ಕರಪತ್ರಗಳನ್ನು ಕನ್ನಡ ಭವನದಲ್ಲಿ ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಬಿಡುಗಡೆಗೊಳಿಸಿದರು.

ನಂತರ ಮಾತನಾಡಿದ ಅವರು, ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸುವುದರ ಜತೆಗೆ ಎಲ್ಲೆಡೆ ಕನ್ನಡದ ಕಂಪು ಹರಡಬೇಕು. ಇತರೆ ಸಮ್ಮೇಳನಕ್ಕಿಂತ ಈ ಸಮ್ಮೇಳನ ವಿಭಿನ್ನವಾಗಿ ನಡೆಸಿ, ಕನ್ನಡ ಭಾಷೆ, ನೆಲ-ಜಲ ದ ಉಳಿವಿಗಾಗಿ ಪರಿಷತ್ತು ಶ್ರಮಿಸಲು ಪ್ರೇರಣೆ ನೀಡಲಾಗುತ್ತಿದೆ. ಕನ್ನಡ ನಾಡು ಶ್ರೀಮಂತ ನಾಡು, ಕನ್ನಡ, ಕನ್ನಡಿಗರ ಸಮಸ್ಯೆಗಳನ್ನು ಸಮ್ಮೇಳನದಲ್ಲಿ ಚರ್ಚಿಸುವ ವಿಶೇಷ ಕಾರ್ಯ ಸಮ್ಮೇಳನದಲ್ಲಿ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಸಮ್ಮೇಳನ ಇಡೀ ಕನ್ನಡಿಗರ ಕಾರ್ಯಕ್ರಮವಾಗಿದ್ದು, ಎಲ್ಲರೂ ಆಗಮಿಸುವ ಮೂಲಕ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಕಸಾಪ ತಾಲೂಕಾಧ್ಯಕ್ಷ ಗುರುಬಸಪ್ಪ ಎಸ್ ಸಜ್ಜನಶೆಟ್ಟಿ ಮಾತನಾಡಿ, ಸಮ್ಮೇಳನವನ್ನು ಮಾದರಿಯ ಸಮ್ಮೇಳವನ್ನಾಗಿ ನಡೆಸಲು ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾತ್ತಿದ್ದು, ಭಾಗವಹಿಸುವ ಶಿಕ್ಷಕರಿಗೆ ಓಓಡಿ ವ್ಯವಸ್ಥೆ ಕಲ್ಪಿಸಲಾಗುವುದೆಂದರು.

ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ವಿನೋದ ಪಾಟೀಲ ಸರಡಗಿ, ಕಾರ್ಯಾಧ್ಯಕ್ಷ ರಾಘವೇಂದ್ರ ಕಲ್ಯಾಣಕರ್, ಧರ್ಮಣ್ಣ ಎಚ್. ಧನ್ನಿ, ಶರಣರಾಜ ಛಪ್ಪರಬಂದಿ, ರಾಜೇಂದ್ರ ಮಾಡಬೂಳ, ಕುಪೇಂದ್ರ ಬರಗಾಲಿ, ವಿಜಯಕುಮಾರ ಹಾಬನೂರ, ಕವಿತಾ ಕವಳೆ, ವಿಶ್ವನಾಥ ಯನಗುಂಟಿ, ಸುನೀತಾ ಮಾಳಗಿ, ರೇವಯ್ಯಾ ಸ್ವಾಮಿ, ವಿಶಾಲಾಕ್ಷಿ ಮಾಯಣ್ಣವರ್, ಮಲ್ಲಿಕಾರ್ಜುನ ಇಬ್ರಾಹಿಂಪುರ, ಭಾಗ್ಯಶ್ರೀ ಮರಗೋಳ, ರೇವಣಸಿದ್ದಪ್ಪ ಗುಂಡಗುರ್ತಿ, ಎಂ ಎನ್ ಸುಗಂಧಿ, ಶಂಭುಲಿಂಗ ಬುಳ್ಳಾ ಇದ್ದರು.