ಸಾರಾಂಶ
- ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ಆಯೋಜನೆ
- - -ದಾವಣಗೆರೆ: ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಆಶ್ರಯದಲ್ಲಿ 2024-25ನೇ ಸಾಲಿನ ಸಾರ್ವಜನಿಕ ಶಿಕ್ಷಣ ಇಲಾಖೆಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿವಿಧ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು ಎಂದು ಸಂಸ್ಥೆ ಸಂಸ್ಥಾಪಕ ಸಾಲಿಗ್ರಾಮ ಗಣೇಶ್ ಶೆಣೈ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜು.19ರಂದು ಬೆಳಗ್ಗೆ 10 ಗಂಟೆಗೆ ನಗರದ ಹದಡಿ ರಸ್ತೆಯ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ದೂರದರ್ಶನ ಕೇಂದ್ರದ ನಿರೂಪಕ ಎಚ್.ರಾಜಶೇಖರ ಕಾರ್ಯಕ್ರಮ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಸಂಸ್ಥೆ ಅಧ್ಯಕ್ಷ ಕೆ.ಎಚ್. ಮಂಜುನಾಥ್ ವಹಿಸಿಕೊಳ್ಳುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಮೈಸೂರಿನ ಜಿಲ್ಲಾಧ್ಯಕ್ಷ ಡಾ.ನಾಗರಾಜ ಬೈರಿ, ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕಿ ಜ್ಯೋತಿ ಗಣೇಶ್ ಶೆಣೈ, ಮಹಿಳಾ ವಿಭಾಗದ ಅಧ್ಯಕ್ಷೆ ಹೇಮಾ ಶಾಂತಪ್ಪ ಪೂಜಾರಿ ಭಾಗವಹಿಸುವರು ಎಂದರು.20ರಂದು ನಡೆಯುವ ಕಾರ್ಯಕ್ರಮವನ್ನು ಗಾಯಕ ಬೆಂಗಳೂರಿನ ಪುತ್ತೂರು ನರಸಿಂಹ ನಾಯಕ್ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಕಲಾಕುಂಚ, ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ ಸಂಸ್ಥಾಪಕ ಸಾಲಿಗ್ರಾಮ ಗಣೇಶ್ ಶೆಣೈ ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ, ಮೋತಿ ಗೌರಮ್ಮ ಮೋತಿ ಪಿ.ರಾಮರಾವ್ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಮೋತಿ ಪರಮೇಶ್ವರ ರಾವ್, ಕಲಾಕುಂಚದ ಸಂಸ್ಥೆ ಅಧ್ಯಕ್ಷ ಕೆ.ಎಚ್. ಮಂಜುನಾಥ್ ಪಾಲ್ಗೊಳ್ಳುವರು. ಕಲಾಕುಂಚ ಮಹಿಳಾ ವಿಭಾಗ ಗೌರವಾಧ್ಯಕ್ಷೆ ವಸಂತಿ ಮಂಜುನಾಥ್, ಉಡುಪಿ ಜಿಲ್ಲೆಯ ಉದ್ಯಾವರದ ಬಾಲನೃತ್ಯ ಕಲಾವಿದೆ ಕುಮಾರಿ ಶ್ರೇಷ್ಠ ರಾಮಚಂದ್ರ ದೇವಾಡಿಗ ವೇದಿಕೆಯಲ್ಲಿ ಇರಲಿದ್ದಾರೆ. ಮಕ್ಕಳಿಗೆ ಅಂದು ಕನ್ನಡ ಕುವರ-ಕುವರಿ, ಕನ್ನಡ ಕೌಸ್ತುಭ, ಸರಸ್ವತಿ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಜ್ಯೋತಿ ಗಣೇಶ್ ಶೆಣೈ, ಹೇಮಾ ಶಾಂತಪ್ಪ ಪೂಜಾರಿ, ಶಾಂತಪ್ಪ ಪೂಜಾರಿ, ವಿ.ಕೃಷ್ಣ ಮೂರ್ತಿ, ಲಲಿತಾ ಕಲ್ಲೇಶ್, ಕೆ.ಸಿ.ಉಮೇಶ್ ಇದ್ದರು.- - -
-16ಕೆಡಿವಿಜಿ32: ಸಾಲಿಗ್ರಾಮ ಗಣೇಶ್ ಶೆಣೈ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮುಖಂಡರು ಇದ್ದರು.