ಕನಕಪುರ: ಚಿಕ್ಕತಿರುಪತಿ ಎಂದೇ ಖ್ಯಾತಿ ಗಳಿಸಿರುವ ತಾಲೂಕಿನ ಪುರಾಣ ಪ್ರಸಿದ್ಧ ಕಲ್ಲಹಳ್ಳಿ ಶ್ರೀ ವೆಂಕಟರಮಣಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ನೆರವೇರಿಸಲಾಯಿತು

ಕನಕಪುರ: ಚಿಕ್ಕತಿರುಪತಿ ಎಂದೇ ಖ್ಯಾತಿ ಗಳಿಸಿರುವ ತಾಲೂಕಿನ ಪುರಾಣ ಪ್ರಸಿದ್ಧ ಕಲ್ಲಹಳ್ಳಿ ಶ್ರೀ ವೆಂಕಟರಮಣಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ನೆರವೇರಿಸಲಾಯಿತು.

ರಥೋತ್ಸವದ ಪ್ರಯುಕ್ತ ಶ್ರೀ ವೆಂಕಟೇಶ್ವರ ಸ್ವಾಮಿಗೆ ದೇವರಿಗೆ ಬೆಳಗಿನ ಜಾವದಿಂದಲೇ ಅಭಿಷೇಕ, ಹೂವಿನ ವಿಶೇಷ ಅಲಂಕಾರ ಮಾಡಿ ಮಹಾಮಂಗಳಾರತಿ ನೇರವೇರಿಸಿ, ಭಕ್ತರ ದರ್ಶನಕ್ಕೆ ಅವಕಾಶ ಮಾಡಿ ಕೊಡಲಾಯಿತು. ಮಧ್ಯಾಹ್ನ1 ಗಂಟೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೇವಾಲಯಕ್ಕೆ ಭೇಟಿ ನೀಡಿ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ

ಬಳಿಕ ತಹಸೀಲ್ದಾರ್ ಸಂಜಯ್ ರಥದಲ್ಲಿ ಕುಳ್ಳರಿಸಿದ್ದ ಸ್ವಾಮಿಯ ಉತ್ಸವ ಮೂರ್ತಿ ರಥೋತ್ಸವಕ್ಕೆ ಚಾಲನೆ ನೀಡಿದರು.

ತಾಲೂಕಿನ ಅಪಾರ ಭಕ್ತರು ಬೆಳಗಿನ ಜಾವದಿಂದಲೇ ಸರದಿಯಲ್ಲಿ ನಿಂತು ದೇವರ ದರ್ಶನ ಪಡೆದು ರಥೋತ್ಸವದಲ್ಲಿ ದೇವರಿಗೆ ಹಣ್ಣು- ಜವನ ಅರ್ಪಿಸಿ ಧನ್ಯರಾದರು. ದೇವಾಲಯದ ಆಡಳಿತ ಮಂಡಳಿ ವತಿಯಿಂದ ರಥೋತ್ಸವಕ್ಕೆ ಬಂದಂತಹ ಭಕ್ತರಿಗೆ ಲಾಡು ಹಾಗೂ ಅನ್ನ ಪ್ರಸಾದ ವಿತರಿಸಿದರು.

ಕೆ ಕೆ ಪಿ ಸುದ್ದಿ 01:

ಕನಕಪುರ ತಾಲೂಕಿನ ಕಲ್ಲಹಳ್ಳಿ ಶ್ರೀ ವೆಂಕಟರಮಣಸ್ವಾಮಿ ರಥೋತ್ಸವದಲ್ಲಿ ಪಾಲ್ಗೊಂಡಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌.