ಸಾರಾಂಶ
ಕನ್ನಡಪ್ರಭ ವಾರ್ತೆ ಮೂಡಲಗಿ
ತಾಲೂಕಿನ ಕಲ್ಲೋಳಿ ಪಟ್ಟಣ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಮಾಯವ್ವ ಬಸವಂತ ದಾಸನವರ ಮತ್ತು ಉಪಾಧ್ಯಕ್ಷರಾಗಿ ಮೇಘಾ ಬಸವರಾಜ ಖಾನಾಪೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ತಹಸೀಲ್ದಾರ್ ಮಹಾದೇವ ಸನ್ನಮುರಿ ತಿಳಿಸಿದರು.ಸೋಮವಾರ ಜರುಗಿದ ಪಟ್ಟಣ ಪಂಚಾಯತಿ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಎರಡೂ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಿಂದುಳಿದ ವರ್ಗ ಅ ಮಹಿಳೆಗೆ ಅಧ್ಯಕ್ಷ ಸ್ಥಾನ ಮೀಸಲಿದ್ದರೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಿತ್ತು. ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳು ಅವಿರೋಧವಾಗಿ ಆಯ್ಕೆಯಾದರು. ಈ ವೇಳೆ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಬಸಗೌಡ ಪಾಟೀಲ, ಪಟ್ಟಣ ಪಂಚಾಯತಿ ಸದಸ್ಯರು, ಮುಖಂಡರು, ಶಾಸಕರ ಆಪ್ತ ಸಹಾಯಕರಾದ ಡಿ.ಕೆ.ನಾಯಿಕ ಮತ್ತು ಸಿ.ಪಿ.ಯಕ್ಸಂಬಿ ಉಪಸ್ಥಿತರಿದ್ದರು.ಕಲ್ಲೋಳಿ ಪಟ್ಟಣ ಪಂಚಾಯತಿ ಅಭಿವೃದ್ಧಿಗೆ ಬದ್ಧನಾಗಿದ್ದೇನೆ. ಸರ್ಕಾರದ ಹಲವಾರು ಯೋಜನೆಗಳನ್ನು ಈಗಾಗಲೇ ಜಾರಿಗೊಳಿಸಿದ್ದೇನೆ. ಮುಂದೆಯೂ ಸಹ ಪಟ್ಟಣದ ಏಳ್ಗೆಗೆ ಸರ್ಕಾರದ ಅನುದಾನಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನೂತನ ಅಧ್ಯಕ್ಷ-ಉಪಾಧ್ಯಕ್ಷರು ಸ್ಥಳೀಯ ಮಟ್ಟದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಮತ್ತು ಜಾತಿ-ಭೇದ ಮರೆತು ಒಗ್ಗಟ್ಟಿನ ಮಂತ್ರ ಜಪಿಸಿ ಅಭಿವೃದ್ಧಿಗೆ ಆದ್ಯತೆ ನೀಡುವ ಕೆಲಸವಾಗಬೇಕು. ಎಲ್ಲ ರೀತಿಯಿಂದಲೂ ಸಹಕಾರ ನೀಡಲು ಸಿದ್ಧನಿದ್ದೇನೆ.
-ಬಾಲಚಂದ್ರ ಜಾರಕಿಹೊಳಿ ಅರಬಾವಿ ಶಾಸಕರು.ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಹಾಗೂ ಪಟ್ಟಣ ಪಂಚಾಯತಿ ಸದಸ್ಯರು ಮತ್ತು ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಲ್ಲೋಳಿ ಪಟ್ಟಣದ ಅಭಿವೃದ್ಧಿಗೆ ಪಕ್ಷಾತೀತವಾಗಿ ಶ್ರಮಿಸುತ್ತೇನೆ.
-ಮಾಯವ್ವ ದಾಸನವರ, ನೂತನ ಅಧ್ಯಕ್ಷೆ.;Resize=(128,128))
;Resize=(128,128))
;Resize=(128,128))
;Resize=(128,128))