ಸಾರಾಂಶ
ಶತಮಾನ ಪೂರೈಸಿದ ಕಲ್ಲೋಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಕಳೆದ ಮಾರ್ಚ್ ಅಂತ್ಯಕ್ಕೆ ₹58.34 ಲಕ್ಷ ಲಾಭ ಗಳಿಸಿ ಪ್ರಗತಿ ಪತಥದತ್ತಸಾಗಿದೆ
ಕನ್ನಡಪ್ರಭ ವಾರ್ತೆ ಮೂಡಲಗಿ
ಶತಮಾನ ಪೂರೈಸಿದ ಕಲ್ಲೋಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಕಳೆದ ಮಾರ್ಚ್ ಅಂತ್ಯಕ್ಕೆ ₹58.34 ಲಕ್ಷ ಲಾಭ ಗಳಿಸಿ ಪ್ರಗತಿ ಪತಥದತ್ತಸಾಗಿದೆ ಎಂದು ಸಂಘದ ಅಧ್ಯಕ್ಷ ಹಾಗೂ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ನೀಲಕಂಠ ಬಸಪ್ಪ ಕಪ್ಪಲಗುದ್ದಿ ಹೇಳಿದರು.ತಾಲೂಕಿನ ಕಲ್ಲೋಳಿ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಸಂಘದ ಪ್ರಸಕ್ತ ಸಾಲಿನ ಆರ್ಥಿಕ ವರ್ಷದ ಅಂತ್ಯದ ಪ್ರಗತಿ ಕುರಿತು ಜರುಗಿದ ಸಭೆಯಲ್ಲಿ ಮಾತನಾಡಿದ ಅವರು, ಕಳೆದ 112 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಪ್ರಗತಿಯನ್ನು ಸಾಧಿಸುತ್ತಾ ಬಂದಿರುವ ನಮ್ಮ ಸಂಘವು ಕಳೆದ ಮಾರ್ಚ್ 31ಕ್ಕೆ 2,848 ಸಾಮಾನ್ಯ ಸದಸ್ಯರಿಂದ ₹2.69 ಕೋಟಿ ಶೇರು ಬಂಡವಾಳ ಹೊಂದಿದೆ. ನಿಧಿಗಳು ₹5.90 ಕೋಟಿ, ಗುಂತಾವಣೆ ಹಾಗೂ ಬಿಡಿಸಿಸಿ ಬ್ಯಾಂಕನಲ್ಲಿ ಆರ್‌ಎಫ್‌ಡಿ ಸಹಿತ ₹7.34 ಕೋಟಿ, ಸಂಘ 1438 ಸದಸ್ಯರಿಗೆ ₹15.84 ಕೋಟಿ ಬೆಳೆಸಾಲ ಹಾಗೂ 05 ಸದಸ್ಯರಿಗೆ ₹27.16 ಲಕ್ಷ ಟ್ರ್ಯಾಕ್ಟರ್ ಸಾಲ, 14 ಸದಸ್ಯರಿಗೆ ಹೈನುಗಾರಿಕೆ ಸಾಲವನ್ನು ಬಿಡಿಸಿಸಿ ಬ್ಯಾಂಕಿನಿಂದ ವಿತರಿಸಲಾಗಿದೆ. ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಶ್ರಮಿಸಿದ ಫಲವಾಗಿ ಸಂಘವು ಶೇ.100ರಷ್ಟು ವಸೂಲಾತಿ ಹೊಂದಿ ಸಂಘವು ಪ್ರಗತಿ ಪಥದತ್ತ ಸಾಗಿದೆ ಎಂದರು.
ಇದೇ ಸಮಯದಲ್ಲಿ ಸಂಘದ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಬಾಗೇವಾಡಿ ಸೇವಾ ನಿವೃತ್ತಿ ಹೊಂದಿದ ಪ್ರಯುಕ್ತ ಸಂಘದ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರು ಸನ್ಮಾನಿಸಿ, ಬೀಳ್ಕೊಡುಗೆ ನೀಡಿದರು.ಈ ವೇಳೆ ಸಂಘದ ಉಪಾಧ್ಯಕ್ಷ ಭೀಮಪ್ಪ ವ್ಯಾಪಾರಿ, ನಿರ್ದೇಶಕರಾದ ಬಸವರಾಜ ಬೆಳಕೂಡ, ಮಲ್ಲಪ್ಪ ಕಡಾಡಿ, ಆನಂದ ಹೆಬ್ಬಾಳ, ಶಂಕರ ಗೋರೋಶಿ, ಬಸಪ್ಪ ಬಿ.ಪಾಟೀಲ, ಧರೀಶ ಖಾನಗೌಡ್ರ, ಮಹಾದೇವಿ ಖಾನಾಪೂರ, ಕೆಂಪವ್ವ ಗೋರೋಶಿ, ಮಲ್ಲಪ್ಪ ಪೂಜೇರಿ, ಧರ್ಮಣ್ಣ ನಂದಿ, ಬಿಡಿಸಿಸಿ ಬ್ಯಾಂಕ್ ಪ್ರತಿನಿಧಿ ವಸಂತ ತಹಸೀಲ್ದಾರ್, ಅಕೌಂಟೆಂಟ್ ಮಲ್ಲಪ್ಪ ಹೆಬ್ಬಾಳ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.