ಕಂಬಳದಿಂದ ಗ್ರಾಮದ ಜನರಲ್ಲಿ ಒಗ್ಗಟ್ಟು ಮೂಡಲು ಸಾಧ್ಯ: ಶ್ರೀ ಚಂದ್ರಶೇಖರ ಸ್ವಾಮೀಜಿ

| Published : Feb 02 2025, 01:03 AM IST

ಕಂಬಳದಿಂದ ಗ್ರಾಮದ ಜನರಲ್ಲಿ ಒಗ್ಗಟ್ಟು ಮೂಡಲು ಸಾಧ್ಯ: ಶ್ರೀ ಚಂದ್ರಶೇಖರ ಸ್ವಾಮೀಜಿ
Share this Article
  • FB
  • TW
  • Linkdin
  • Email

ಸಾರಾಂಶ

ಕಂಬಳವು ಕೇವಲ ಕರಾವಳಿಗೆ ಸೀಮಿತವಾಗಿರದೆ ರಾಜ್ಯ ಪ್ರವಾಸೋದ್ಯಮ ನಕ್ಷೆಯಲ್ಲಿ ಕಂಗೊಳಿಸಬೇಕು ಹಾಗೂ ಕಂಬಳ ಎಂಬುದು ಜಾನಪದ ಕ್ರೀಡೆ ಎನ್ನುವುದಕ್ಕಿಂತಲೂ ಕರಾವಳಿ ಮಣ್ಣಿನ ಹಬ್ಬ. ಅಭಿಮಾನದ ಸ್ವಾಭಿಮಾನದ ಪ್ರತೀಕವಾಗಿದ್ದು ಪ್ರಾಣಿ ಮತ್ತು ಮನುಷ್ಯರ ನಡುವಣ ಸಂಬಂಧವಾಗಿ ಬಹಳಷ್ಟು ಮಹತ್ವ ಪಡೆದಿದೆ ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಮೂಲ್ಕಿ ಕಂಬಳ ಕೇವಲ ಕ್ರೀಡೆಯಲ್ಲ ತುಳುನಾಡಿನ ಸಂಸ್ಕೃತಿಯ ಪ್ರತೀಕವಾಗಿದ್ದು ಕಂಬಳದ ಮೂಲಕ ಗ್ರಾಮದ ಜನರಲ್ಲಿ ಒಗ್ಗಟು ಮೂಡಲು ಸಾಧ್ಯ ಎಂದು ಆಧ್ಯಾತ್ಮಿಕ ವಿಶ್ವ ಗುರು, ಅಂತಾರಾಷ್ಟ್ರೀಯ ವಾಸ್ತುತಜ್ಞ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು.

ಐಕಳ ಬಾವದ ಧಾರ್ಮಿಕ ಹಿನ್ನೆಲೆಯುಳ್ಳ, ತುಳುನಾಡಿನ ಕಾರ್ಣಿಕ ಪುರುಷರಾದ ಕಾಂತಾಬಾರೆ ಬೂದಾಬಾರೆ ನಾಮಾಂಕಿತ, 49ನೇ ವರ್ಷದ ಐಕಳ ಕಂಬಳೋತ್ಸವ ಹಾಗೂ ಐಕಳೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.

ಕಂಬಳವು ಕೇವಲ ಕರಾವಳಿಗೆ ಸೀಮಿತವಾಗಿರದೆ ರಾಜ್ಯ ಪ್ರವಾಸೋದ್ಯಮ ನಕ್ಷೆಯಲ್ಲಿ ಕಂಗೊಳಿಸಬೇಕು ಹಾಗೂ ಕಂಬಳ ಎಂಬುದು ಜಾನಪದ ಕ್ರೀಡೆ ಎನ್ನುವುದಕ್ಕಿಂತಲೂ ಕರಾವಳಿ ಮಣ್ಣಿನ ಹಬ್ಬ. ಅಭಿಮಾನದ ಸ್ವಾಭಿಮಾನದ ಪ್ರತೀಕವಾಗಿದ್ದು ಪ್ರಾಣಿ ಮತ್ತು ಮನುಷ್ಯರ ನಡುವಣ ಸಂಬಂಧವಾಗಿ ಬಹಳಷ್ಟು ಮಹತ್ವ ಪಡೆದಿದೆ ಎಂದು ಹೇಳಿದರು.

ಅಧ್ಯಕ್ಷತೆಯನ್ನು ಐಕಳ ಬಾವ ಕುಟುಂಬ ಕಡೆ ಕ್ಷೇಮಾಭಿವೃದ್ಧಿ ಟ್ರಸ್ಟ್‌ ಅಧ್ಯಕ್ಷ ಡಾ.ಕೆ.ಪಿ.ಕೆ. ಹೆಗ್ಡೆ ವಹಿಸಿದ್ದರು. ಏಳಿಂಜೆ ದೇವಸ್ಥಾನದ ಅರ್ಚಕರಾದ ಗಣೇಶ್ ಭಟ್ ಹಾಗೂ ವರುಣ್ ಭಟ್ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಕಂಬಳದ ಕರೆಯನ್ನು ಅದಾನಿ ಫೌಂಡೇಶನ್ ದಕ್ಷಿಣ ಭಾರತದ ಅಧ್ಯಕ್ಷ ಕಿಶೋರ್ ಆಳ್ವ ಉದ್ಘಾಟಿಸಿದರು. ಕಟೀಲು ಕ್ಷೇತ್ರದ ಅರ್ಚಕ ವೇದಮೂರ್ತಿ ಅನಂತಪದ್ಮನಾಭ ಆಸ್ರಣ್ಣ, ದಾಮಸ್‌ ಕಟ್ಟೆ ಕಿರೆಂ ರೆಮೆದಿ ಅಮ್ಮನವರ ದೇವಾಲಯದ ಪ್ರಧಾನ ಧರ್ಮಗುರು ರೆ.ಫಾ. ಒಸ್ವಾಲ್ಡ್ ಮೊಂತೆರೋ ಆಶೀರ್ವಚನ ನೀಡಿದರು. ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್, ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಸೀನಿಯರ್ ಕಮಾಂಡೆಂಟ್ ವೀರೇಂದ್ರ ಮೋಹನ್ ಜೋಷಿ, ಐಕಳ ಗ್ರಾಮ ಪಂಚಾಯಿತಿ ಅಧ್ಯಕ್ಷ ದಿವಾಕರ ಚೌಟ, ಮಾತೃಶ್ರೀ ಶಾರದಮ್ಮ, ವಿಶ್ವನಾಥ ಭಟ್ ಎಸ್. ಕೋಡಿ, ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕರಾದ ರಜನಿ ಸಿ. ಭಟ್, ರಾಹುಲ್‌ ಚಂದ್ರಶೇಖರ್, ಸಂಚಾಲಕ ಪುನೀತ್ ಕೃಷ್ಣ, ಮಂಗಳೂರು ಕೆಎಂಎಫ್ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ಕಿನ್ನಿಗೋಳಿ ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ, ಎಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ಹೆಗ್ಡೆ, ಐಕಳಬಾವ ಯಜಮಾನರಾದ ದೋಗಣ್ಣ ಸಿ. ಶೆಟ್ಟಿ, ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಕಂಬಳ ಸಮಿತಿಯ ಅಧ್ಯಕ್ಷ ಐಕಳ ಬಾವ ಡಾ. ದೇವಿಪ್ರಸಾದ್ ಶೆಟ್ಟಿ, ಮುಂಬೈ ಸಮಿತಿ ಅಧ್ಯಕ್ಷ ಕುಶಲ್ ಭಂಡಾರಿ, ಐಕಳ ಬಾವ ಕಾರ್ಯಾಧ್ಯಕ್ಷ ಚಿತ್ತರಂಜನ್ ಭಂಡಾರಿ, ಉಪಾಧ್ಯಕ್ಷರಾದ ವೈ. ಯೋಗೀಶ್ ರಾವ್, ಪ್ರಮೋದ್ ಶೆಟ್ಟಿ, ಕೃಷ್ಣ ಮಾರ್ಲ, ಸಂಚಾಲಕ ಮುರಳಿಧರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸ್ವರಾಜ್ ಶೆಟ್ಟಿ ಮುಂಡ್ಕೂರು ದೊಡ್ಡಮನೆ, ಕೋಶಾಧಿಕಾರಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಜೊತೆ ಕೋಶಾಧಿಕಾರಿ ಶರತ್ ಶೆಟ್ಟಿ ಸ್ಥಳಂತಗುತ್ತು, ಸಂತೋಷ್ ಶೆಟ್ಟಿ ತೆಂಕರ ಗುತ್ತು, ಸಂಘಟನಾ ಕಾರ್ಯದರ್ಶಿ ಸಾಯಿನಾಥ ಶೆಟ್ಟಿ ಮುಂಡ್ಕೂರು, ಸಂಜೀವ ಶೆಟ್ಟಿ ಸ್ಥಳಂತಗುತ್ತು, ಲೀಲಾಧರ ಶೆಟ್ಟಿ ಐಕಳ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶ್ರೀ ಚಂದ್ರಶೇಖರ ಸ್ವಾಮೀಜಿ ಹಾಗೂ ರಜನಿ ಸಿ. ಭಟ್ ಅವರನ್ನು ಕಂಬಳ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ದ.ಕ. ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಡಾ. ದೇವಿ ಪ್ರಸಾದ್ ಶೆಟ್ಟಿ ಅವರನ್ನು ಚಂದ್ರಶೇಖರ ಸ್ವಾಮೀಜಿ ಗೌರವಿಸಿದರು. ರಾಜ್ಯೋತ್ಸವ ಪ್ರಶಸ್ತಿ ವಿಜೇತ ವಾಮನ್ ಸಾಲ್ಯಾನ್, ಬಾಲ ಪ್ರತಿಭೆ ಸ್ವಾತಿ ಪ್ರವೀಣ್ ಸಾಲ್ಯಾನ್, ಆನಂದ ಕೊಳಕೆ ಇರ್ವತ್ತೂರು ಅವರನ್ನು ಗೌರವಿಸಲಾಯಿತುಕಂಬಳ ಸಮಿತಿ ಅಧ್ಯಕ್ಷ ಡಾ. ದೇವಿ ಪ್ರಸಾದ್ ಶೆಟ್ಟಿ ಸ್ವಾಗತಿಸಿದರು, ಸಾಯಿನಾಥ ಶೆಟ್ಟಿ, ಶ್ರೀಶ ಸರಾಫ್ ಐಕಳ, ಶರತ್ ಶೆಟ್ಟಿ ನಿರೂಪಿಸಿದರು. ಸುಮಾರು 170ಕ್ಕೂ ಹೆಚ್ಚು ಜೊತೆ ಕೋಣಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು.