ಸಾರಾಂಶ
ತೆಂಗು ಮತ್ತು ಅಡಿಕೆ ತೋಟದಲ್ಲಿ ಸೂಕ್ಷ್ಮಾಣು ಜೀವಿಗಳ ಸಂಖ್ಯೆಯನ್ನು ಹೆಚ್ಚಿಸಲು ಬೆಳೆ ತ್ಯಾಜ್ಯ ಬಳಕೆ ಮತ್ತು ಹಸಿರೆಲೆ ಗೊಬ್ಬರವಾಗಿ ದ್ವಿದಳ ಧಾನ್ಯ ಬೆಳೆಗಳನ್ನು ತೆಂಗಿನ ತೋಟದಲ್ಲಿ ಬೆಳೆಯುವಂತೆ
ಕನ್ನಡಪ್ರಭ ವಾರ್ತೆ ಮೈಸೂರು
ತೆಂಗು ಮತ್ತು ಅಡಿಕೆ ಬೆಳೆಗಳಲ್ಲಿ ನೈಸರ್ಗಿಕ ಕೃಷಿ ವಿಧಾನಗಳನ್ನು ಅನುಸರಿಸುವುದರಿಂದ ಮಣ್ಣಿನ ಆರೋಗ್ಯ ಕಾಪಾಡುವುದರ ಜೊತೆಗೆ ಕಡಿಮೆ ನೀರಿನಲ್ಲಿ ಉತ್ತಮ ಬೆಳೆ ಪಡೆಯಲು ಸಾಧ್ಯ ಎಂದು ಪ್ರಗತಿಪರ ನೈಸರ್ಗಿಕ ಕೃಷಿಕ ಕಣಗಾಲ್ ಕೃಷ್ಣಮೂರ್ತಿ ತಿಳಿಸಿದರು.ಮೈಸೂರು ತಾಲೂಕಿನ ನಾಗನಹಳ್ಳಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೋಮವಾರ ಆಯೋಜಿಸಿದ್ದ ತೆಂಗು ಮತ್ತು ಅಡಿಕೆ ಬೆಳೆಗಳಲ್ಲಿ ಸೂಕ್ಷ್ಮ ನೀರಾವರಿ ವಿಧಾನಗಳು, ರಸಾವರಿ ಮತ್ತು ಸಮಗ್ರ ಬೆಳೆ ನಿರ್ವಹಣೆ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು.
ತೆಂಗು ಮತ್ತು ಅಡಿಕೆ ತೋಟದಲ್ಲಿ ಸೂಕ್ಷ್ಮಾಣು ಜೀವಿಗಳ ಸಂಖ್ಯೆಯನ್ನು ಹೆಚ್ಚಿಸಲು ಬೆಳೆ ತ್ಯಾಜ್ಯ ಬಳಕೆ ಮತ್ತು ಹಸಿರೆಲೆ ಗೊಬ್ಬರವಾಗಿ ದ್ವಿದಳ ಧಾನ್ಯ ಬೆಳೆಗಳನ್ನು ತೆಂಗಿನ ತೋಟದಲ್ಲಿ ಬೆಳೆಯುವಂತೆ ಅವರು ಹೇಳಿದರು.ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ ಕೃಷಿ ನಿರ್ದೇಶಕ ಡಾ.ಜಿ.ಎಚ್. ಯೋಗೇಶ್ ಮಾತನಾಡಿ, ತೆಂಗು ಮತ್ತು ಅಡಿಕೆ ಬೆಳೆಗಳಲ್ಲಿ ತ್ಯಾಜ್ಯ ನಿರ್ವಹಣೆ ಹಾಗೂ ಸೂಕ್ಷ್ಮ ನೀರಾವರಿ ಘಟಕಗಳಾದ ಹನಿ/ ತುಂತುರು ನೀರಾವರಿ ತಾಂತ್ರಿಕತೆಗಳ ಅಳವಡಿಕೆ ಕುರಿತು ತಾಂತ್ರಿಕ ಮಾಹಿತಿಯನ್ನು ನೀಡಿದರು.
ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ತಜ್ಞ ಡಾ. ಮೋಹನ್ ಕುಮಾರ್, ಪ್ರೀಮಿಯರ್ ಇರಿಗೇಷನ್ ಕಂಪನಿಯ ನೀರಾವರಿ ತಜ್ಞ ವಿಜಯಕುಮಾರ್, ರೋಗ ತಜ್ಞೆ ಡಾ.ಆರ್.ಎನ್. ಪುಷ್ಪಾ, ಇಲವಾಲ ತೋಟಗಾರಿಕಾ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ಜಿ.ಕೆ. ರಾಮೇಗೌಡ ಅವರು ರೈತರಿಗೆ ತಾಂತ್ರಿಕ ಮಾಹಿತಿ ನೀಡಿದರು.ಈ ತರಬೇತಿಯಲ್ಲಿ ಜಿಲ್ಲೆಯ 45 ಜನ ತೆಂಗು ಅಡಿಕೆ ಬೆಳೆಗಾರರು ಪಾಲ್ಗೊಂಡಿದ್ದರು. ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರಾದ ಎಸ್.ಬಿ. ಮಮತಾ, ಎಚ್.ಬಿ. ಮಧುಲತಾ, ಎಸ್.ಕೆ. ವಜ್ರೇಶ್ವರಿ, ಕೃಷಿ ಅಧಿಕಾರಿ ಎಲ್. ಮಾಲತಿ, ಎಚ್.ಆರ್. ರಾಜಶೇಖರ, ಜಿ.ಕೆ. ಶಿಲ್ಪಾ, ಎಂ.ಬಿ. ಮಂಜುಳ ಇದ್ದರು.