ಸಾರಾಂಶ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ: ಪಟ್ಟಣದ ಬಿಎಲ್‌ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಭಕ್ತ ಕನಕದಾಸ ಜಯಂತಿಯಂಗವಾಗಿ ಸೋಮವಾರ ಭಕ್ತ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕನಕದಾಸ ಜಯಂತಿ ಆಚರಿಸಲಾಯಿತು.
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ:
ಪಟ್ಟಣದ ಬಿಎಲ್‌ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಭಕ್ತ ಕನಕದಾಸ ಜಯಂತಿಯಂಗವಾಗಿ ಸೋಮವಾರ ಭಕ್ತ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕನಕದಾಸ ಜಯಂತಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಡಾ.ವೈ.ಬಿ.ನಾಯಕ ಮಾತನಾಡಿ, ಸಾಹಿತ್ಯ ಮತ್ತು ಸಮಾಜ ಸುಧಾರಣೆಯಲ್ಲಿ ಭಕ್ತ ಕನಕದಾಸರ ಕೊಡುಗೆ ಅಪಾರವಾಗಿದೆ. ಕನಕದಾಸರು ಕನ್ನಡ ಸಾಹಿತ್ಯಕ್ಕೆ ಅಮೂಲ್ಯವಾದ ರಾಮಧಾನ್ಯ ಚರಿತೆ, ಮೋಹನ ತರಂಗಿಣಿ, ನಳಚರಿತೆ ಕೃತಿಗಳನ್ನು ನೀಡುವ ಮೂಲಕ ಸಾಹಿತ್ಯ ಲೋಕದ ಶ್ರೀಮಂತಿಕೆಯನ್ನು ಹೆಚ್ಚಿಸಿದ್ದಾರೆ. ಸಮಾಜದಲ್ಲಿ ಜಾತಿ ವ್ಯವಸ್ಥೆಯನ್ನು ಹೋಗಲಾಡಿಸಿ ಸಮಾನತೆಗಾಗಿ ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜಕ್ಕೆ ಸಂದೇಶ ಸಾರಿದ್ದಾರೆ. ಕನಕದಾಸರು ನೀಡಿದ ತತ್ವ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ಬಿ.ಎಂ.ಸಾಲವಾಡಗಿ, ಪ್ರೊ.ದಿಲೀಪಕುಮಾರ, ಎಂ.ಕೆ.ಯಾದವ, ಪಿ.ಎಸ್.ನಾಟೀಕಾರ, ಎಸ್.ಜೆ.ಸೂರ್ಯವಂಶಿ, ಆರ್.ಎಂ.ಮುಜಾವರ, ಬೋಧಕೇತರ ಸಿಬ್ಬಂದಿ ಎಲ್.ಆರ್.ರಾಠೋಡ, ಭೀಮು ಸಿಂಧೆ, ಬಸವರಾಜ ಮುದ್ದೇಬಿಹಾಳ, ಮಾರುತಿ ಕನಸೆ ಇದ್ದರು.