ಸಾರಾಂಶ
ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಇಲ್ಲಿನ ವಿದ್ಯಾರ್ಥಿ ಕ್ಷೇಮ ಪಾಲನ ಸಮಿತಿ ಹಾಗೂ ಐಕ್ಯೂಎಸಿ ಆಶ್ರಯದಲ್ಲಿ ಇತ್ತೀಚೆಗೆ ಕನಕ ಜಯಂತಿ ದಿನವನ್ನು ಆಚರಿಸಲಾಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ನಗರದ ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಇಲ್ಲಿನ ವಿದ್ಯಾರ್ಥಿ ಕ್ಷೇಮ ಪಾಲನ ಸಮಿತಿ ಹಾಗೂ ಐಕ್ಯೂಎಸಿ ಆಶ್ರಯದಲ್ಲಿ ಇತ್ತೀಚೆಗೆ ಕನಕ ಜಯಂತಿ ದಿನವನ್ನು ಆಚರಿಸಲಾಯಿತು.ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿಕೊಂಡ ಪ್ರಾಂಶುಪಾಲ ಪ್ರೊ. ಶ್ರೀಧರ್ ಪ್ರಸಾದ್, ಕನಕದಾಸರ ನೀತಿ ಹಾಗೂ ತತ್ವಗಳು ಭಜನೆಗಳ ರೂಪದಲ್ಲಿ ಮನೆ ಮನಗಳಲ್ಲಿ ಜೀವಂತವಾಗಿದೆ. ಅವರ ತತ್ವ ಮತ್ತು ಆದರ್ಶಗಳು ಇಂದಿಗೂ ಪ್ರಸ್ತುತ ಎಂಬುದನ್ನು ನುಡಿದರು.ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥರು ಹಾಗೂ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿಗಳಾದ ಪ್ರೊಫೆಸರ್ ನಿಕೇತನ ಅವರು ಕನಕದಾಸರ ಬದುಕು ಸಾಹಿತ್ಯದಲ್ಲಿರುವ ಜಾತಿ ನಿರಸನ ಹಾಗೂ ಅಹಂ ನಿರಸನ ತತ್ವಗಳನ್ನು ನಾವೆಲ್ಲರೂ ಪರಿಪಾಲಿಸಬೇಕಾದ ಅಗತ್ಯತೆಯ ಬಗ್ಗೆ ಮಾತನಾಡಿದರು.ಐಕ್ಯುಎಸಿ ಸಂಚಾಲಕ ಪ್ರೊ.ಶ್ರೀಮತಿ ಅಡಿಗ ಕನಕದಾಸರ ಬದುಕು ಬರಹಗಳ ಕುರಿತು ಮಾತನಾಡಿದರು. ಡಾ. ಪಿ.ಬಿ. ಪ್ರಸನ್ನ ಅವರು ಕನಕ ಗೀತೆಯ ಮೂಲಕ ಕಾರ್ಯಕ್ರಮವನ್ನು ಶುಭಾರಂಭಿಸಿದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ವಿದ್ಯಾ ಡಿ. ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸಮಾರಂಭದಲ್ಲಿ ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.