ಗದಗ: ಬೆಂಗಳೂರಿನ ಕನಕದಾಸರ ಸಾಹಿತ್ಯ ಪ್ರಚಾರ ಸಮಿತಿ ಸಹಯೋಗದೊಂದಿಗೆ ಮಾ. 1ರಂದು ಬೆಳಗ್ಗೆ 9.30ಕ್ಕೆ ನಗರದ ಕನಕ ಭವನದಲ್ಲಿ ಕನಕ ಸಾಹಿತ್ಯ ಸಂಭ್ರಮ ಹಾಗೂ 100ನೇ ಉಪನ್ಯಾಸದ ವೇದಿಕೆಯ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಜಿಲ್ಲಾ ಕುರುಬರ ಸಂಘದ ಜಿಲ್ಲಾಧ್ಯಕ್ಷ ಫಕೀರಪ್ಪ ಹೆಬಸೂರ ತಿಳಿಸಿದರು.ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಮಕೃಷ್ಣ ಯೋಗಾಶ್ರಮದ ಜಗದ್ಗುರು ಸ್ವಾಮಿ ಯೋಗೇಶ್ವರಾನಂದ ಸ್ವಾಮೀಜಿ, ಮನಸೂರಿನ ಡಾ. ಬಸವರಾಜ ದೇವರು ಸಾನ್ನಿಧ್ಯ ವಹಿಸುವರು. ಜಿಲ್ಲಾ ಕುರುಬರ ಸಂಘದ ಜಿಲ್ಲಾಧ್ಯಕ್ಷ ಫಕೀರಪ್ಪ ಹೆಬಸೂರ ಅಧ್ಯಕ್ಷತೆ ವಹಿಸುವರು. ಹಾಲುಮತ ಭಾಸ್ಕರ ರಾಜ್ಯ ಕನಕಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಲಿಂಗದಾಳ ಹಾಲಪ್ಪ ಕಾರ್ಯಕ್ರಮವನ್ನು ಉದ್ಘಾಟಿಸುವರು.

ಪ್ರಾಧ್ಯಾಪಕಿ ಡಾ. ಸುಧಾ ಕೌಜಗೇರಿ ಉಪನ್ಯಾಸ ನೀಡುವರು. ಪ್ರೊ. ಎಫ್.ಟಿ.ಹಳ್ಳಿಕೇರಿ, ಮಂಜುನಾಥ ಹೊನ್ನಣ್ಣವರ, ಡಾ. ಹನುಮಗೌಡ ಪಾಟೀಲ, ವಾಸಣ್ಣ ಕುರಡಗಿ, ಹಾಲುಮತ ಮಹಾಸಭಾದ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ, ರವಿ ದಂಡಿನ, ಪ್ರಕಾಶ ಕರಿ, ಸುರೇಶ ಕೊಪ್ಪದ, ರಾಜಶೇಖರ ಕಲ್ಲೂರ, ಸಿದ್ಧಲಿಂಗ ಬಂಡು, ಆರ್.ಎಸ್. ಬುರಡಿ, ರಾಮಕೃಷ್ಣ ರೊಳ್ಳಿ ಸೇರಿದಂತೆ ಮುಂತಾದವರು ಭಾಗವಹಿಸುವರು ಎಂದರು.

ಇದೇ ಸಂದರ್ಭದಲ್ಲಿ ಗದಗ, ರೋಣ, ಮುಂಡರಗಿ, ನರಗುಂದ, ಶಿರಹಟ್ಟಿ, ಲಕ್ಷ್ಮೇಶ್ವರ ಮತ್ತು ಗಜೇಂದ್ರಗಡ ಪಪೂ ಕಾಲೇಜಿನ ಮತ್ತು ಪ್ರೌಢಶಾಲೆಯ ಹಂತದ ಕನಕದಾಸರ ಸಾಹಿತ್ಯ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಹಾಗೂ 76ರಿಂದ 100ನೇ ಆನ್‌ಲೈನ್ ಗೂಗಲ್ ಮೀಟ್‌ನಲ್ಲಿ ಕನಕದಾಸರ ಸಾಹಿತ್ಯದ ಉಪನ್ಯಾಸ ನೀಡಿದವರನ್ನು ಸನ್ಮಾನಿಸಲಾಗುವುದು. ಕನಕ ದಾಸರ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ 42 ವಿದ್ಯಾರ್ಥಿಗಳಿಗೆ ನಗದು ಬಹುಮಾನ ಜತೆಗೆ ಪ್ರಮಾಣಪತ್ರ ವಿತರಣೆ ಮಾಡಲಾಗುತ್ತದೆ ಎಂದರು.

ಈ ವೇಳೆ ಹಾಲುಮತ ಮಹಾಸಭಾದ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ, ಆರ್.ಜಿ. ಕಲ್ಲೂರ, ಬಿ.ಎಸ್. ಕೆರಿ, ಈರಪ್ಪ ಹಳ್ಯಾಳ, ಸಿದ್ದು ಸತ್ಯಣ್ಣವರ, ಪ್ರೊ. ಮಾರುತಿ ಮಡ್ಡಿ, ಸಿದ್ಧಲಿಂಗೇಶ್ವರ ಯಂಡಿಗೇರಿ, ಹೇಮಂತ ಗಿಡ್ಡಹಣ್ಣಮನವರ, ಸೋಮನಗೌಡ ಪಾಟೀಲ, ಮುತ್ತು ಜಡಿ, ರಾಘು ವಗ್ಗನವರ ಸೇರಿದಂತೆ ಇತರರು ಇದ್ದರು.