ಮನುಷ್ಯತ್ವದ ಬೀಜ ಬಿತ್ತಿದ ಕನಕದಾಸರು: ಸಿಎಂ ಸಿದ್ದರಾಮಯ್ಯ

| Published : Feb 19 2024, 01:32 AM IST

ಮನುಷ್ಯತ್ವದ ಬೀಜ ಬಿತ್ತಿದ ಕನಕದಾಸರು: ಸಿಎಂ ಸಿದ್ದರಾಮಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಮನುಷ್ಯತ್ವದ ಬೀಜ ಬಿತ್ತಿದ್ದ ಕನಕದಾಸರು ಆಕಸ್ಮಕವಾಗಿ ಕುರುಬ ಜಾತಿಯಲ್ಲಿ ಹುಟ್ಟಿದ್ದಾರೆ ಅಷ್ಟೆ. ಕನಕದಾಸರು ವಿಶ್ವಮಾನವರು. ಕುಲ ಕುಲ ಎಂದು ಹೊಡೆದಾಡಬೇಡಿ ಎಂದು ಸಮಾಜಕ್ಕೆ ಸಂದೇಶ ನೀಡಿದ್ದರು. ಕನಕದಾಸರ ಪ್ರತಿಮೆ ನಿರ್ಮಾಣ ಮಾಡೋದು ಮುಖ್ಯವಲ್ಲ. ಅವರ ಸಂದೇಶಗಳನ್ನು ಎಲ್ಲರು ಪಾಲಿಸಬೇಕು. ಅವರ ಅದರ್ಶ ಗುಣಗಳನ್ನು ಪ್ರತಿಯೊಬ್ಬರು ಮೈಗೂಡಿಸಬೇಕು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ತಾಲೂಕಿನ ಮಂಚನಹಳ್ಳಿಯಲ್ಲಿ ಶ್ರೀಭಕ್ತಕನಕದಾಸ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು.

ನಂತರ ಮಾತನಾಡಿದ ಸಿಎಂ, ಕನಕದಾಸರು ದೇಶದಲ್ಲಿ ಜಾತಿ ತಾರತಮ್ಯವನ್ನು ಹೋಗಲಾಡಿಸಬೇಕೆಂಬ ಕನಸು ಕಂಡಿದ್ದರು. ಜನರು ಪ್ರೀತಿಯಿಂದ ಭಕ್ತಕನಕದಾಸ, ಸಂತ ಕನಕದಾಸ ಎಂದು ಕರೆಯುತ್ತಾರೆ. ಮನುಷ್ಯತ್ವದ ಬೀಜ ಬಿತ್ತಿದ್ದ ಕನಕದಾಸರು ಆಕಸ್ಮಕವಾಗಿ ಕುರುಬ ಜಾತಿಯಲ್ಲಿ ಹುಟ್ಟಿದ್ದಾರೆ ಅಷ್ಟೆ ಎಂದರು.

ಕನಕದಾಸರು ವಿಶ್ವಮಾನವರು. ಕುಲ ಕುಲ ಎಂದು ಹೊಡೆದಾಡಬೇಡಿ ಎಂದು ಸಮಾಜಕ್ಕೆ ಸಂದೇಶ ನೀಡಿದ್ದರು. ಕನಕದಾಸರ ಪ್ರತಿಮೆ ನಿರ್ಮಾಣ ಮಾಡೋದು ಮುಖ್ಯವಲ್ಲ. ಅವರ ಸಂದೇಶಗಳನ್ನು ಎಲ್ಲರು ಪಾಲಿಸಬೇಕು. ಅವರ ಅದರ್ಶ ಗುಣಗಳನ್ನು ಪ್ರತಿಯೊಬ್ಬರು ಮೈಗೂಡಿಸಬೇಕೆಂದು ಸಲಹೆ ನೀಡಿದರು.

ಇದೇ ವೇಳೆ ಮಸ್ಥರು ಜಾನಪದ ಕಲಾತಂಡಗೊಂದಿಗೆ ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡು ಬೃಹತ್ ಸೇಬಿನ ಹಾರ ಹಾಕಿ ಅಭಿನಂದಿಸಿ ಗೌರವಿಸಿದರು. ನನ್ನಿಂದ ಕನಕರ ಕಂಚಿನ ಪ್ರತಿಮೆಯನ್ನು ಅನಾವರಣ ಮಾಡಿಸಿದ್ದಕ್ಕೆ ಧನ್ಯವಾದಗಳನ್ನು ಹೇಳುತ್ತೇನೆ ಎಂದರು. ನಂತರ ಪಟ್ಟಣದ ಭಕ್ತಕನಕದಾಸ ವಿದ್ಯಾರ್ಥಿನಿಲಯ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರೆವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಪಿ.ಎಂ.ನರೇಂದ್ರಸ್ವಾಮಿ ವಹಿಸಿದ್ದರು. ಸಚಿವರಾದ ಎನ್.ಚಲುವರಾಯಸ್ವಾಮಿ, ಸತೀಶ್ ಜಾರಕಿಹೊಳಿ, ಬಿ.ಎಸ್.ಸುರೇಶ್, ಶಾಸಕರಾದ ಪಿ.ರವಿಕುಮಾರ್, ಕೆ.ಎಂ.ಉದಯ್, ಎ.ಬಿ.ರಮೇಶ್ ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಧು ಜಿ.ಮಾದೇಗೌಡ, ಉದ್ಯಮಿ ಸ್ಟಾರ್ ಚಂದ್ರು, ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್ , ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್.ಯತೀಶ್, ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್.ನಾಗರಾಜು, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ಕೆ.ಎನ್.ಲೋಕೇಶ್ ಸೇರಿದಂತೆ ಇತರರಿದ್ದರು.