ಸಮಾಜದಲ್ಲಿ ಸಮಾನತೆಗಾಗಿ ತಮ್ಮದೆಯಾದ ಕೀರ್ತನೆಗಳ ಮೂಲಕ ಅರಿವು ಮೂಡಿಸಿದ ಕನಕದಾಸರು ನಂಬಿಕೆ, ಜಾತಿ ಪದ್ಧತಿ ಸೇರಿದಂತೆ ಅನಿಷ್ಟ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿದ್ದಾರೆ
ಯಲಬುರ್ಗಾ: ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ಹಾಲುಮತ ಸಮಾಜದಿಂದ ದಾಸಶ್ರೇಷ್ಠ ಭಕ್ತ ಕನಕದಾಸರ ಜಯಂತಿ ಅಂಗವಾಗಿ ಕನಕದಾಸರ ಭಾವಚಿತ್ರ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.
ಗುಂಟಮಡು ಗ್ರಾಮದ ಸಂಜೀವಪ್ಪಯ್ಯ ತಾತ ಮಾತನಾಡಿ, ಸಮಾಜದಲ್ಲಿ ಸಮಾನತೆಗಾಗಿ ತಮ್ಮದೆಯಾದ ಕೀರ್ತನೆಗಳ ಮೂಲಕ ಅರಿವು ಮೂಡಿಸಿದ ಕನಕದಾಸರು ನಂಬಿಕೆ, ಜಾತಿ ಪದ್ಧತಿ ಸೇರಿದಂತೆ ಅನಿಷ್ಟ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿದ್ದಾರೆ. ಕನಕದಾಸರು ಯಾವುದೇ ಒಂದು ವರ್ಗಕ್ಕೆ ಸೀಮಿತವಾಗಿಲ್ಲ. ಅವರು ಕಾವ್ಯ ಹಾಗೂ ಕೀರ್ತನೆಗಳ ಮೂಲಕ ಸಮಾಜದಲ್ಲಿ ಬೇರೂರಿದ್ದ ಕಂದಾಚಾರ ಹೋಗಲಾಡಿಸಲು ಶ್ರಮಿಸಿ ಸಾಹಿತ್ಯಕ್ಕೆ ತಮ್ಮದೆ ಕೊಡುಗೆ ನೀಡಿದ್ದಾರೆ. ಎಲ್ಲರನ್ನು ಸಮಾನತೆ ದೃಷ್ಟಿಕೋನದಿಂದ ನೋಡುವಂತೆ ತಿಳಿಸಿದ ವಿಶ್ವಮಾನವರಾಗಿದ್ದಾರೆ ಎಂದರು.ನಂತರ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮಹಿಳೆಯರಿಂದ ಕುಂಭ, ಕಳಸ ಡೋಳ್ಳು ಕುಣಿತ, ಕುದುರೆ ಕುಣಿತ, ಭಾಜಾ ಭಜಂತ್ರಿ ಮೇಳದೋಂದಿಗೆ ಕನಕದಾಸರ ಭಾವಚಿತ್ರ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭ ಟೆಂಗುಂಟಿಯ ಮಳಿಯಪ್ಪಯ್ಯ ತಾತನವರು ಸೇರಿದಂತೆ ಸಮಾಜದ ಗಣ್ಯರು, ಯುವಕರು ಭಾಗವಹಿಸಿದ್ದರು.