ಕನಕದಾಸರ ಕೀರ್ತನೆಗಳು ಸರ್ವಕಾಲಕ್ಕೂ ಪ್ರಸ್ತುತ

| Published : Nov 09 2025, 01:15 AM IST

ಕನಕದಾಸರ ಕೀರ್ತನೆಗಳು ಸರ್ವಕಾಲಕ್ಕೂ ಪ್ರಸ್ತುತ
Share this Article
  • FB
  • TW
  • Linkdin
  • Email

ಸಾರಾಂಶ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆವರಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆವರಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.

ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಏರ್ಪಡಿಸಿದ್ದ ''ದಾಸಶ್ರೇಷ್ಠ ಕನಕದಾಸರ 538ನೇ ಜಯಂತ್ಯುತ್ಸವ'' ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂಗೊಳ್ಳಿರಾಯಣ್ಣ ಪ್ರತಿಮೆ ಜೊತೆಗೆ ತಾಲೂಕಿನಲ್ಲಿ ಕನಕ ಭವನ ನಿರ್ಮಾಣ ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಾಸ್ಟೆಲ್ ನಿರ್ಮಾಣಕ್ಕೂ ಬೇಗ ಕ್ರಮ ವಹಿಸಲಾಗುವುದು ಎಂದು ಹೇಳಿದರು.

12ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಶ್ರಮಿಸಿದ ಬಸವಣ್ಣನವರಂತೆ, 15ನೇ ಶತಮಾನದಲ್ಲಿ ಸಮಾಜ ಪರಿವರ್ತನೆಗೆ ಶ್ರಮಿಸಿದವರಲ್ಲಿ ಮಹಾನ್ ಸಂತರಾದ ಕನಕದಾಸರು ಪ್ರಮುಖರು. ಸಮಾಜದ ಪರಿವರ್ತನೆ ಹಾಗೂ ಮೇಲು ಕೀಳು ಎಂಬ ಮನೋಭಾವನೆ ಹೋಗಲಾಡಿಸಲು ದಾಸಶ್ರೇಷ್ಠ ಕನಕದಾಸ ಕೀರ್ತನೆಗಳು ಸರ್ವಕಾಲಿಕ ಪ್ರಸ್ತುತ ಎಂದು ತಿಳಿಸಿದರು.

ಪ್ರತಿಯೊಂದು ಸಮುದಾಯದವರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಕೊಡಿಸಿ, ಉನ್ನತ ಹುದ್ದೆಗಳನ್ನು ಪಡೆದುಕೊಂಡು ಸಮುದಾಯದ ಸರ್ವೋತೋಮುಖ ಏಳ್ಗೆ ಹೊಂದಬೇಕು ಎಂದು ಸಚಿವರು ಹೇಳಿದರು.

ಪರಿವರ್ತನೆಗೆ ಶ್ರಮಿಸಿದ ದಾಸರು:

ಜಾನಪದ ಲೋಕದ ಸಂಶೋಧಕ ಡಾ. ರವಿ ಉಪನ್ಯಾಸ ನೀಡಿ, 15ನೇ ಶತಮಾನದಲ್ಲಿ ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿ ಸಾಮರಸ್ಯದ ಸಂದೇಶ ಬಿತ್ತಿ, ಸಮಾಜ ಪರಿವರ್ತನೆಗೆ ಶ್ರಮಿಸಿದ ದಾಸಶ್ರೇಷ್ಠ ಕನಕದಾಸರು. ಅವರ ಕೀರ್ತನೆಗಳು ಎಂದೆಂದಿಗೂ ಸಾರ್ವಕಾಲಿಕ ಪ್ರಸ್ತುತವಾಗಿವೆ ಎಂದು ಹೇಳಿದರು.

ಪ್ರತಿಭಾ ಪುರಸ್ಕಾರ:

ಇದೇ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.

ವೇದಿಕೆ ಕಾರ್ಯಕ್ರಮ ಆರಂಭಕ್ಕೂ ಮುನ್ನ ಕನಕದಾಸರ ವೃತ್ತದಿಂದ ಡಾ. ಬಿ‌.ಆರ್.ಅಂಬೇಡ್ಕರ್ ಭವನದವರೆಗೆ ವಿವಿಧ ಕಲಾತಂಡಗಳೊಂದಿಗೆ ಕನಕದಾಸರ ಉತ್ಸವ ಪಲ್ಲಕ್ಕಿಗಳ ಮೆರವಣಿಗೆ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಪಂ ಸಿಇಒ ಡಾ.ಕೆ.ಎನ್ ಅನುರಾಧ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಬಿ. ರಾಜಣ್ಣ,ಬಯಪ್ಪ ಅಧ್ಯಕ್ಷ ವಿ‌.ಶಾಂತಕುಮಾರ, ಕನ್ನಡ ಚಲನಚಿತ್ರ ನಟ ಧ್ರುವ ಸರ್ಜಾ, ತಾಲೂಕು ಅಧ್ಯಕ್ಷ ಜಗನ್ನಾಥ್, ದೇವನಹಳ್ಳಿ ಪುರಸಭೆ ಅಧ್ಯಕ್ಷ ಡಿ.ಎಂ ಮುನಿಕೃಷ್ಣಪ್ಪ, ಉಪಾಧ್ಯಕ್ಷರಾದ ಜಿ.ಎ.ರವೀಂದ್ರ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್, ತಹಸೀಲ್ದಾರ್ ಅನಿಲ್, ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು ಉಪಸ್ಥಿತರಿದ್ದರು.

(ಎರಡೂ ಫೋಟೋ ಬಳಸಿ ಸರ್‌)

8ಕೆಡಿಬಿಪಿ2-

ಬೆಂ.ಗ್ರಾ ಜಿಲ್ಲಾಡಳಿತದಿಂದ ನಡೆದ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಉದ್ಘಾಟಿಸಿದರು.

8ಕೆಡಿಬಿಪಿ3-

ಬೆಂ.ಗ್ರಾ ಜಿಲ್ಲಾಡಳಿತದಿಂದ ನಡೆದ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು.