ಸಾರಾಂಶ
ಕನಕದಾಸರು ಒಂದು ವರ್ಗದ ಸೀಮಿತವಾಗಿಲ್ಲ. ಸಮಾಜದಲ್ಲಿ ಬೇರೂರಿದ್ದ ಕಂದಾಚಾರಗಳನ್ನು ತಮ್ಮ ಕಾವ್ಯ ಹಾಗೂ ಕೀರ್ತನೆಗಳ ಮೂಲಕ ಹೋಗಲಾಡಿಸಲು ಶ್ರಮಿಸಿದರು. ಮೂಢನಂಬಿಕೆ, ಜಾತಿ ಪದ್ಧತಿ ಸೇರಿದಂತೆ ಅನಿಷ್ಟ ಪದ್ಧತಿಗಳನ್ನು ಹೋಗಲಾಡಿಸಲು ಶ್ರಮಿಸಿದ್ದರು.
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ದಾಸ ಶ್ರೇಷ್ಠ ಕನಕದಾಸರು ಸಮಾಜದಲ್ಲಿ ಅನಿಷ್ಟ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿ ಅಂಕು-ಡೊಂಕುಗಳನ್ನು ತಿದ್ದಿದ ಮಹಾನ್ ಚೇತನ ಎಂದು ತಹಸೀಲ್ದಾರ್ ಪರುಶುರಾಮ್ ಸತ್ತಿಗೇರಿ ಹೇಳಿದರು.ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ದಾಸರಲ್ಲಿ ಶ್ರೇಷ್ಠ ಭಕ್ತ ಕನಕದಾಸರ 537ನೇ ವರ್ಷದ ಜಯಂತ್ಯುತ್ಸವದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.
ಕನಕದಾಸರು ಒಂದು ವರ್ಗದ ಸೀಮಿತವಾಗಿಲ್ಲ. ಸಮಾಜದಲ್ಲಿ ಬೇರೂರಿದ್ದ ಕಂದಾಚಾರಗಳನ್ನು ತಮ್ಮ ಕಾವ್ಯ ಹಾಗೂ ಕೀರ್ತನೆಗಳ ಮೂಲಕ ಹೋಗಲಾಡಿಸಲು ಶ್ರಮಿಸಿದರು. ಮೂಢನಂಬಿಕೆ, ಜಾತಿ ಪದ್ಧತಿ ಸೇರಿದಂತೆ ಅನಿಷ್ಟ ಪದ್ಧತಿಗಳನ್ನು ಹೋಗಲಾಡಿಸಲು ಶ್ರಮಿಸಿದ್ದರು ಎಂದರು.ಸಾಹಿತ್ಯಕ್ಕೆ ತನ್ನದೆ ಆದ ಕೊಡುಗೆ ನೀಡಿದ ಕನಕದಾಸರು ಎಲ್ಲರನ್ನು ಸಮಾನತೆಯ ದೃಷ್ಟಿಕೋನದಿಂದ ಕಾಣುವಂತೆ ವಿಶ್ವದಲ್ಲಿ ಸಾರಿದ್ದರು. ಅವರು ತಮ್ಮ ಸರ್ವಸ್ವ ತ್ಯಾಗ ಮಾಡಿ ಮನುಕುಲದ ಉದ್ಧಾರಕ್ಕೆ ಜೀವನವನ್ನು ಮುಡುಪಾಗಿಸಿದ ಮಹಾನ್ ಸಂತ ಎಂದು ಬಣ್ಣಿಸಿದರು.
ಈ ವೇಳೆ ಕುರುಬ ಸಮಾಜದ ತಾಲೂಕು ಅಧ್ಯಕ್ಷ ಹಂಪಾಪುರ ಕೃಷ್ಣ, ಕಾರ್ಯದರ್ಶಿ ವಿನಯ್, ಜಿಲ್ಲಾ ಸಂಘಟನಾ ಕಾರ್ಯದರ್ಶೀ ಎಂ.ಲೋಕೇಶ್, ಮುಖಂಡರಾದ ಆರ್. ಭಾಸ್ಕರ್, ಚನ್ನೇಗೌಡ, ಚಿಕ್ಕಣ್ಣ, ಮಹೇಶ್ವರ, ಮುದ್ದೇಗೌಡ, ಬಸವರಾಜು, ಹರೀಶ್, ಕರವೇ ಚಂದಗಲಾಲು ಶಂಕರ್ ಸೇರಿದಂತೆ ಇತರರು ಭಾಗವಹಿಸಿದರು.