ದಾಸ ಸಾಹಿತ್ಯದಿಂದ ಜೀವನಪಾಠ ಸಾರಿದ ಕನಕದಾಸರು:

| Published : Nov 09 2025, 03:00 AM IST

ದಾಸ ಸಾಹಿತ್ಯದಿಂದ ಜೀವನಪಾಠ ಸಾರಿದ ಕನಕದಾಸರು:
Share this Article
  • FB
  • TW
  • Linkdin
  • Email

ಸಾರಾಂಶ

ದಾಸ ಸಾಹಿತ್ಯಕ್ಕೆ ಗಣನೀಯ ಕೊಡುಗೆ ಕೊಟ್ಟವರು ಕನಕದಾಸರು. ಕನ್ನಡ ಭಾಷೆಯ ಕೀರ್ತನೆಕಾರರು ಮತ್ತು ಪುರಂದರ ದಾಸರೊಂದಿಗೆ ಕರ್ನಾಟಕ ಸಂಗೀತಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಸಮಾಜದ ಗುರುಗಳಾದ ಫಕ್ಕೀರಯ್ಯ ಅಮೋಘಿಮಠ ಹೇಳಿದರು.

ಮುಳಗುಂದ: ದಾಸ ಸಾಹಿತ್ಯದ ಮೂಲಕ ಜೀವನಪಾಠ ಸಾರಿದವರು ಕನಕದಾಸರು. ಜಾತಿ, ಮತ, ಕುಲಗಳ ಭೇದ-ಭಾವವನ್ನು ಮೀರಿಸುವಂತೆ ಸಮಾಜದ ಪಿಡುಗುಗಳ ಜನ ಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಿ, ಸಾಮಾಜಿಕ ಕ್ರಾಂತಿಯನ್ನೇ ಮಾಡಿದ ಸಂತವರೇಣ್ಯರು ಕನಕದಾಸರು ಎಂದು ಸಮಾಜದ ಗುರುಗಳಾದ ಫಕ್ಕೀರಯ್ಯ ಅಮೋಘಿಮಠ ಅವರು ಹೇಳಿದರು.

ಸ್ಥಳೀಯ ಪಪಂ ಕಾರ್ಯಾಲಯದಲ್ಲಿ ನಡೆದ ದಾಸ ಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದಾಸ ಪರಂಪರೆಯಲ್ಲಿ ಅಗ್ರಸ್ಥಾನದಲ್ಲಿ ಬರುವ ದಾಸರಲ್ಲಿ ಶ್ರೇಷ್ಠ ಕನಕದಾಸರು ಎಂದರು.

ದಾಸ ಸಾಹಿತ್ಯಕ್ಕೆ ಗಣನೀಯ ಕೊಡುಗೆ ಕೊಟ್ಟವರು ಕನಕದಾಸರು. ಕನ್ನಡ ಭಾಷೆಯ ಕೀರ್ತನೆಕಾರರು ಮತ್ತು ಪುರಂದರ ದಾಸರೊಂದಿಗೆ ಕರ್ನಾಟಕ ಸಂಗೀತಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಕನಕದಾಸರು ಕೀರ್ತನರಾರರಾಗಿ, ತತ್ತ್ವಜ್ಞಾನಿಯಾಗಿ, ಸಂತರಾಗಿ, ದಾರ್ಶನಿಕರಾಗಿ ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಗೆ ಅನನ್ಯ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

ಸಾಹಿತ್ಯದ ವಿವಿಧ ಪ್ರಕಾರಗಳಾದ ಕೀರ್ತನೆಗಳು, ಸುಳಾದಿಗಳು, ಉಗಾಭೋಗಗಳು ಕನ್ನಡ ಸಾಹಿತ್ಯ ಲೋಕಕ್ಕೆ ಅರ್ಪಿಸಿದ್ದಾರೆ. ಅಲ್ಲದೆ, ಸಂಗೀತ ಪ್ರಪಂಚಕ್ಕೆ ತನ್ನದೇ ಆದ ಕೊಡುಗೆಯನ್ನು ಮಂಡಿಗೆಗಳ ರೂಪದಲ್ಲಿ ಕೊಟ್ಟಿದ್ದಾರೆ. ಅವುಗಳಲ್ಲಿ ಪ್ರಮುಖವಾಗಿ ಮೋಹನತರಂಗಿಣಿ, ನಳಚರಿತ್ರೆ, ರಾಮಧಾನ್ಯ ಚರಿತೆ, ಹರಿಭಕ್ತಿಸಾರ ಹಾಗೂ ನೃಸಿಂಹಸ್ತವ ಎಂದು ಅವರ ಜೀವನ, ಸಾಧನೆ ಕುರಿತು ಸುದೀರ್ಘವಾಗಿ ಮಾತನಾಡಿದರು.

ಪಪಂ ಸದಸ್ಯ ಕೆ.ಎಲ್‌. ಕರಿಗೌಡರ, ಪಪಂ ಮುಖ್ಯಾಧಿಕಾರಿ ಮಂಜುನಾಥ ಗುಳೇದ ಮಾತನಾಡಿದರು. ಮುಳಗುಂದ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಸುಂಕಾಪುರ, ಪಪಂ ಅಧ್ಯಕ್ಷೆ ಯಲ್ಲವ್ವ ಕವಲೂರ, ಸದಸ್ಯರಾದ ಮಹಾಂತೇಶ ನೀಲಗುಂದ, ಎನ್‌.ಆರ್‌. ದೇಶಪಾಂಡೆ, ಮಹಾದೇವಪ್ಪ ಗಡಾದ, ಅಶೋಕ ಹುಣಸಿಮರದ, ಮಲ್ಲಮ್ಮ ಚವ್ಹಾಣ, ಮರಿಯಪ್ಪ ನಡುಗೇರಿ, ಬಸವರಾಜ ಹಾರೋಗೇರಿ, ಮಲ್ಲಪ್ಪ ಕುಂದಗೋಳ ಇದ್ದರು.