ಸಮಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಕನಕದಾಸ

| Published : Nov 19 2024, 12:51 AM IST

ಸಮಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಕನಕದಾಸ
Share this Article
  • FB
  • TW
  • Linkdin
  • Email

ಸಾರಾಂಶ

ಚಾಮರಾಜನಗರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಕ್ತಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್ ಕುಮಾರ್ ಪುಷ್ಷಾರ್ಚನೆ ಮಾಡಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದರು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಎಸ್.ನಿರಂಜನ್‌ಕುಮಾರ್ ಹೇಳಿದರು.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಭಕ್ತ ಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

15-16ನೇ ಶತಮಾನದಲ್ಲಿ ಭಕ್ತಿಪಂಥದ ಮೂಲಕ ಸಮಾಜ ಸುಧಾರಣೆಗೆ ಶ್ರಮಿಸಿದವರು ಕನಕದಾಸರು. ಕೀರ್ತನೆಗಳನ್ನು ರಚಿಸಿ ನಾಡಿನ ವ್ಯಾಪ್ತಿ ಸಂಚರಿಸುವ ಮೂಲಕ ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಕೆಲಸ ಮಾಡಿದ್ದಾರೆ. ಸಂತರಷ್ಟೆ ಅಲ್ಲದೆ ದಾರ್ಶನಿಕರೂ ಆಗಿದ್ದರು. ಸಾಹಿತ್ಯ, ಸಂಗೀತ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿದ್ದರು. ಕನ್ನಡ ಭಾಷೆಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳೋಣ ಎಂದರು. ಒಬಿಸಿ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ನೂರೊಂದುಶೆಟ್ಟಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್, ಹೊನ್ನೂರು ಮಹದೇವಸ್ವಾಮಿ, ಕೊಡಗು ಮಾಜಿ ಜಿಲ್ಲಾಧ್ಯಕ್ಷ ಭಾರತೀಸ್, ಜಿಪಂ ಮಾಜಿ ಸದಸ್ಯ ಬಾಲರಾಜ್, ಮಾಜಿ ಅಧ್ಯಕ್ಷ ಆರ್.ಸುಂದರ್, ಡಾ.ಎ.ಆರ್ ಬಾಬು, ನಗರಸಭಾ ಮಾಜಿ ಅಧ್ಯಕ್ಷ ಸುರೇಶ್‌ನಾಯಕ, ಒಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಲೋಕೇಶ್‌ಜಟ್ಟಿ, ಅರಕಲವಾಡಿ ನಾಗೇಂದ್ರ, ಹನೂರು ಮಂಡಲ ಅಧ್ಯಕ್ಷ ವೃಷಭೇಂದ್ರಸ್ವಾಮಿ ಡಾ. ನವೀನ್ ಮೌರ್ಯ ಮಹದೇಶ್ವರ ಬೆಟ್ಟ ಮಂಡಲ ಅಧ್ಯಕ್ಷ ರಾಜು ಪ್ರಣಯ್ ನಗರದ ಮಂಡಲ ಪ್ರಧಾನ ಕಾರ್ಯದರ್ಶಿ ಮಹೇಶ್, ಕೂಸಣ್ಣ, ಸರಸ್ವತಿ, ಪದ್ಮ, ಕೇಬಲ್ ರಂಗಸ್ವಾಮಿ ಹಾಜರಿದ್ದರು.