ಕೀರ್ತನೆಗಳ ಮೂಲಕ ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದಿ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಸಂದೇಶ ಸಾರುವ ಮೂಲಕ ಸಮಾಜದಲ್ಲಿ ಬದಲಾವಣೆ ತಂದ ಮಹಾನ್ ಸಂತ ಕನಕದಾಸರು ಎಂದು ತಹಸೀಲ್ದಾರ್‌ ಎಂ. ಜಿ. ಸಂತೋಷ್ ಕುಮಾರ್ ಅಭಿಪ್ರಾಯಪಟ್ಟರು. ಸಮಾಜದಲ್ಲಿ ಎಲ್ಲರೂ ಸಮಾನರು ಎಂಬ ಸಂದೇಶವನ್ನು ತಮ್ಮ ರಚನೆಗಳ ಮೂಲಕ ಜನರಿಗೆ ತಲುಪಿಸಿದ ಮಹಾನ್ ದಾರ್ಶನಿಕರಾಗಿದ್ದಾರೆ. ಅವರ ಜೀವನ, ಸಾಹಿತ್ಯ ಮತ್ತು ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಅರಿತುಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಅರಸೀಕೆರೆ: ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದಿ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಸಂದೇಶ ಸಾರುವ ಮೂಲಕ ಸಮಾಜದಲ್ಲಿ ಬದಲಾವಣೆ ತಂದ ಮಹಾನ್ ಸಂತ ಕನಕದಾಸರು ಎಂದು ತಹಸೀಲ್ದಾರ್‌ ಎಂ. ಜಿ. ಸಂತೋಷ್ ಕುಮಾರ್ ಅಭಿಪ್ರಾಯಪಟ್ಟರು.ನಗರದ ಕಂದಾಯ ಇಲಾಖೆ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಲೂಕು ಕುರುಬ ಸಂಘ ಹಾಗೂ ಕನಕ ಜಯಂತ್ಯೋತ್ಸವ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ 518ನೇ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕನಕದಾಸರು ತಮ್ಮ ಕೀರ್ತನೆಗಳು ಹಾಗೂ ದಾಸ ಸಾಹಿತ್ಯದ ಮೂಲಕ ಸಮಾಜಕ್ಕೆ ಉತ್ತಮ ಸಂದೇಶಗಳನ್ನು ನೀಡಿದ್ದು, ಜಾತಿ ಭೇದಗಳನ್ನು ಮೀರಿ ಸಮಾನತೆ, ಭಕ್ತಿ ಮತ್ತು ಮಾನವೀಯತೆಯ ಮಹತ್ವವನ್ನು ಸಾರಿದ್ದಾರೆ. ಅವರ ಆದರ್ಶಗಳು ಹಾಗೂ ವಿಚಾರಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ ಎಂದು ತಿಳಿಸಿದರು.ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಶೇಖರ್ ಮಾತನಾಡಿ, ಕನಕದಾಸರು ತಮ್ಮ ಸಾಹಿತ್ಯ ಮತ್ತು ಕೀರ್ತನೆಗಳ ಮೂಲಕ ಸಮಾಜದಲ್ಲಿನ ಅಸಮಾನತೆ ಹಾಗೂ ಮೌಢ್ಯಗಳ ವಿರುದ್ಧ ಧ್ವನಿ ಎತ್ತಿದವರು. ಸಮಾಜದಲ್ಲಿ ಎಲ್ಲರೂ ಸಮಾನರು ಎಂಬ ಸಂದೇಶವನ್ನು ತಮ್ಮ ರಚನೆಗಳ ಮೂಲಕ ಜನರಿಗೆ ತಲುಪಿಸಿದ ಮಹಾನ್ ದಾರ್ಶನಿಕರಾಗಿದ್ದಾರೆ. ಅವರ ಜೀವನ, ಸಾಹಿತ್ಯ ಮತ್ತು ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಅರಿತುಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಶಿವಮೂರ್ತಿ, ತೊಂಡಿಗನಹಳ್ಳಿ ಕೃಷ್ಣಮೂರ್ತಿ, ಭೂದೇಶ್ ಒಡೆಯರ್ ಸೇರಿದಂತೆ ಕುರುಬ ಸಮಾಜದ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು.