ಸಮಾಜದಲ್ಲಿ ಸಮಾನತೆ ಸಾರಿದ ಕನಕರು

| Published : Nov 20 2024, 12:30 AM IST

ಸಾರಾಂಶ

ಸಮಾಜದಲ್ಲಿ ನಡೆಯುತ್ತಿದ್ದ ಅಂಕು-ಡೊಂಕುಗಳನ್ನು ತಿದ್ದುವಂತಹ ಕೆಲಸ ಮಾಡಿದ ಮಹನೀಯರಲ್ಲಿ ದಾಸಶ್ರೇಷ್ಠ ಶ್ರೀ ಕನಕದಾಸರು ಪ್ರಮುಖರು ಇಂತಹ ಮಹನೀಯರ ಸಿದ್ದಾಂತಗಳನ್ನು ಆದರ್ಶಗಳನ್ನು ಕೇವಲ ಒಂದು ದಿನಕ್ಕೆ ಸೀಮಿತವಾಗದೆ ಸದಾ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ

ದಾಸ ಶ್ರೇಷ್ಠ ಶ್ರೀ ಕನಕದಾಸರ ತತ್ವ ಸಿದ್ದಾಂತಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ತಹಸೀಲ್ದಾರ್ ಮನೀಶಾ ಮಹೇಶ್ ಪತ್ರಿ ತಿಳಿಸಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಆಯೋಜಿಸಿದ್ದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ತಮ್ಮ ತತ್ವಜ್ಞಾನ , ಚಿಂತನೆಗಳು ಮತ್ತು ಕೀರ್ತನೆಗಳ ಮುಖಾಂತರ ಸಮಾಜದಲ್ಲಿ ಸಮಾನತೆ ಸಾರಿದ ಸಂತ ಕನಕದಾಸರು ಎಂದರು.

ಕನಕರ ಆದರ್ಶ ಪಾಲಿಸಿ

ಸಮಾಜದಲ್ಲಿ ನಡೆಯುತ್ತಿದ್ದ ಅಂಕು-ಡೊಂಕುಗಳನ್ನು ತಿದ್ದುವಂತಹ ಕೆಲಸ ಮಾಡಿದ ಮಹನೀಯರಲ್ಲಿ ದಾಸಶ್ರೇಷ್ಠ ಶ್ರೀ ಕನಕದಾಸರು ಪ್ರಮುಖರು ಇಂತಹ ಮಹನೀಯರ ಸಿದ್ದಾಂತಗಳನ್ನು ಆದರ್ಶಗಳನ್ನು ಕೇವಲ ಒಂದು ದಿನಕ್ಕೆ ಸೀಮಿತವಾಗದೆ ಸದಾ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದದರು. ಪುರಸಭೆ ಸದಸ್ಯರಾದ ಶ್ರೀನಾಥ್ ಅವರು ಮಾತನಾಡಿ ಕನಕದಾಸರು ತಮಗೆ ದೊರೆತ ಸಂಪತ್ತನ್ನು ಬಡವರಲ್ಲಿ ಹಂಚಿದ ಮಹಾದಾನಿ. ಜಾತಿ ರಹಿತವಾದ ಸಮಸಮಾಜ ನಿರ್ಮಾಣವಾಗಬೇಕೆಂದು ಕನಸು ಕಂಡಿದ್ದರು. ತಮ್ಮ ಜೀವನದುದ್ದಕ್ಕೂ ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದಲು ಪ್ರಯತ್ನಿಸಿದ್ದರು ಎಂದರು. ನಾನಾ ಕ್ಷೇತ್ರದ ಸಾಧಕರಿಗೆ ಸನ್ಮಾನ

ಈ ಸಂದರ್ಭದಲ್ಲಿ ಎಸ್. ಎಸ್. ಎಲ್.ಸಿ ಹಾಗೂ ಪಿ.ಯು.ಸಿ ಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ಸಮುದಾಯದ ವಿದ್ಯಾರ್ಥಿಗಳನ್ನು ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯ ವ್ಯಕ್ತಿಗಳನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಬಿಇಓ ಎನ್ ವೆಂಕಟೇಶಪ್ಪ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷಆರ್.ಹನುಮಂತ ರೆಡ್ಡಿ, ಶಿವಪ್ಪ, ಡಾ.ಸತ್ಯನಾರಾಯಣ ರೆಡ್ಡಿ, ನಾರಾಯಣಪ್ಪ ಹಾಗೂ ಕುರುಬ ಸಮಾಜದ ಮುಖಂಡರು ಹಾಗೂ ಪದಾಧಿಕಾರಿಗಳು ಹಾಜರಿದ್ದರು.