ಸಾರಾಂಶ
ಕೆನರಾ ಬ್ಯಾಂಕ್ ನಿಂದ ವಿದ್ಯಾರ್ಥಿ ವೇತನ ವಿತರಣೆಯಲ್ಲಿ ಶಿಕ್ಷಣಾಧಿಕಾರಿ ರುದ್ರಪ್ಪ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಸಾರ್ವಜನಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಕೆನರಾ ಬ್ಯಾಂಕ್ ಹಿಂದುಳಿದ ಮತ್ತು ಬಡ ವಿದ್ಯಾರ್ಥಿನಿಯರಿಗೆ ಉತ್ತಮದ ವಿದ್ಯಾಭ್ಯಾಸ ಒದಗಿಸುವ ಸಲುವಾಗಿ ಅನೇಕ ಯೋಜನೆಗಳನ್ನು ರೂಪಿಸಿರುವ ಭಾಗವಾಗಿ ಕೆನರಾ ವಿದ್ಯಾ ಜ್ಯೋತಿ ಯೋಜನೆಯಲ್ಲಿ ವಿದ್ಯಾರ್ಥಿ ವೇತನ ನೀಡುತ್ತಿರುವುದು ಶ್ಲಾಘನೀಯ ಎಂದು ಚಿಕ್ಕಮಗಳೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಪ್ಪ ತಿಳಿಸಿದರು.
ನಗರದ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಸಿಎಸ್ಆರ್ ಚಟುವಟಿಕೆಯ ಕೆನರಾ ಬ್ಯಾಂಕ್ ವಿದ್ಯಾ ಜ್ಯೋತಿ ಯೋಜನೆಯಡಿ 336 ಪರಿಶಿಷ್ಟ ಜಾತಿ ಮತ್ತು ಪಂಗಡದ 5ನೇ ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ₹13.28 ಲಕ್ಷ ರು. ವಿದ್ಯಾರ್ಥಿ ವೇತನ ವಿತರಿಸಿ ಮಾತನಾಡಿರು.ಬ್ಯಾಂಕ್ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ವಿದ್ಯಾರ್ಥಿ ವೇತನ ವಿತರಿಸುತ್ತಿದ್ದು, ಇದೇ ರೀತಿ ಮುಂದಿನ ದಿನಗಳಲ್ಲೂ ಸಹ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ವಿವಿದ ಯೋಜನೆಗಳನ್ನು ರೂಪಿಸಬೇಕೆಂದು ಹೇಳಿದರು.
ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ಮುಖ್ಯಸ್ಥ ಸೈಯದ್ ಅಬ್ದುಲ್ ರಹತ್ ಮಾತನಾಡಿ, ಕೆನರಾ ಬ್ಯಾಂಕ್ ಸಾರ್ವಜ ನಿಕರಿಗೆ ಅನುಕೂಲವಾಗುವ ರೀತಿ ಅನೇಕ ಯೋಜನೆ ತಂದಿದ್ದು ಅದರಲ್ಲಿ ಕೆನರಾ ವಿದ್ಯಾ ಜ್ಯೋತಿ ಯೋಜನೆ ಒಂದಾಗಿದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿನಿಯರಿಗೆ ನೆರವಾಗಲು ಯೋಜನೆ ಉತ್ತಮವಾಗಿದೆ. ಬ್ಯಾಂಕ್ ಅಂತಹ ವಿದ್ಯಾರ್ಥಿನಿ ಯರನ್ನು ಗುರುತಿಸಿ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಇದನ್ನು ಸದುಪಯೋಗಪಡಿಸಿಕೊಂಡು ಉತ್ತಮ ವಿದ್ಯಾಭ್ಯಾಸ ಪಡೆಯಬೇಕು. ಮುಂದಿನ ದಿನಗಳಲ್ಲಿ ಇದೇ ರೀತಿ ಇನ್ನಷ್ಟು ಉತ್ತಮ ಯೋಜನೆಗಳನ್ನು ತರಲಾಗುವುದು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ವಿಭಾಗಿಯ ವ್ಯವಸ್ಥಾಪಕರಾದ ವಿಜಯಕುಮಾರ್ ಆರ್. ಸಿರ್ನೂರ್ಕರ್, ನಿಖಿಲ್ ರಂಜನ್ , ಮುರಾರಿ ಕುಮಾರ್ ಝಾ, ಶಾಖಾ ವ್ಯವಸ್ಥಾಪಕರು, ಬ್ಯಾಂಕಿನ ಸಿಬ್ಬಂದಿ ಮತ್ತು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ಶಾಲೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಹಾಜರಿದ್ದರು.
15 ಕೆಸಿಕೆಎಂ 2ಚಿಕ್ಕಮಗಳೂರಿನ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯಲ್ಲಿ ಬ್ಯಾಂಕಿನ ವಿದ್ಯಾ ಜ್ಯೋತಿ ಯೋಜನೆಯಡಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಪ್ಪ, ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ಮುಖ್ಯಸ್ಥ ಸೈಯದ್ ಅಬ್ದುಲ್ ರಹತ್, ವಿಭಾಗಿಯ ವ್ಯವಸ್ಥಾಪಕರಾದ ವಿಜಯಕುಮಾರ್ ಆರ್. ಸಿರ್ನೂರ್ಕರ್, ನಿಖಿಲ್ ರಂಜನ್, ಮುರಾರಿ ಕುಮಾರ್ ಝಾ ಇದ್ದರು.