ಸಾರಾಂಶ
ಬಾಗಲಕೋಟೆ ನಗರದ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಆವರಣದಲ್ಲಿರುವ ಕಣವಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಭಾನುವಾರ ಸಹಸ್ರಾರು ಭಕ್ತರ ಮಧ್ಯೆ ಮಹಾರಥೋತ್ಸವ ಅದ್ಧೂರಿಯಾಗಿ ಜರುಗಿತು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ನಗರದ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಆವರಣದಲ್ಲಿರುವ ಕಣವಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಭಾನುವಾರ ಸಹಸ್ರಾರು ಭಕ್ತರ ಮಧ್ಯೆ ಮಹಾರಥೋತ್ಸವ ಅದ್ಧೂರಿಯಾಗಿ ಜರುಗಿತು.ಬೆಳಗಿನ ಜಾವ ಶ್ರೀ ವೀರಭದ್ರೇಶ್ವರ ದೇವರಿಗೆ ಮಹಾರುದ್ರಾಭಿಷೇಕ, ಪುಷ್ಪಾಲಂಕಾರ, ಮಹಾಮಂಗಳಾರತಿ ಮಾಡಲಾಯಿತು ಸಂಜೆ ಸಹಸ್ರಾರು ಭಕ್ತರ ಜಯಘೋಷದ ಮಧ್ಯೆ ಮಹಾರಥೋತ್ಸವ ಜರುಗಿತು. ಬೀಳಗಿ ಕಲ್ಮಠದ ಪೂಜ್ಯರಾದ ಗುರುಪಾದ ಸ್ವಾಮೀಜಿ, ಬಿ.ವಿ.ವಿ.ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ, ಗೌರವ ಕಾರ್ಯದರ್ಶಿ ಮಹೇಶ ಅಥಣಿ, ಸಂಘದ ಸದಸ್ಯರು, ಕಣವಿ ವೀರಭದ್ರೇಶ್ವರ ಟ್ರಸ್ಟ್ ಮತ್ತು ಜಾತ್ರಾ ಕಮಿಟಿ ಸದಸ್ಯರು ಸೇರಿದಂತೆ ನಗರದ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು.