ಸುಂಟಿಕೊಪ್ಪ: ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನ್‌ಬೈಲ್ ಪ್ರೆಂಡ್ಸ್ ಯೂತ್ ವತಿಯಿಂದ ಕಾನ್‌ಬೈಲ್ ಪ್ರಾಥಮಿಕ ಶಾಲೆಯಲ್ಲಿ ಕಾಡು ಗಿಡ ಗಂಟಿಗಳನ್ನು ಕಡಿದು ಶ್ರಮದಾನ ಮೂಲಕ ಸ್ವಚ್ಛಗೊಳಿಸಲಾಯಿತು. ಕಾನ್‌ಬೈಲ್ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬೆಳೆದು ನಿಂತಿದ್ದ ಗಿಡಗಂಟಿಗಳನ್ನು ಪ್ರೆಂಡ್ಸ್ ಯೂತ್ ಕ್ಲಬ್‌ನ ಅಧ್ಯಕ್ಷ ಶಂಕನಾರಾಯಣ, ಉಪಾಧ್ಯಕ್ಷ ಧರ್ಮು ಸೇರಿದಂತೆ ಪದಾಧಿಕಾರಿಗಳು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಗೌರವಾಧ್ಯಕ್ಷ ವಸಂತ, ಮಾಜಿ ಅಧ್ಯಕ್ಷ ಪೌಲೋಸ್, ಕಾರ್ಯದರ್ಶಿ ಪ್ರಶಾಂತ್, ಕ್ರೀಡಾ ಕಾರ್ಯದರ್ಶಿ ಚಂದ್ರು, ಸದಸ್ಯರಾದ ಅನಿಲ್‌ಕುಮಾರ್, ದಿನೇಶ್, ದಯಾನಂದ ರೈ, ದಿವಾಕರ ಮತ್ತಿತರರು ಪಾಲ್ಗೊಂಡಿದ್ದರು.

------------------------------------------

ಮಡಿಕೇರಿ: ಇಂದು ಡಾ.ಫ.ಗು.ಹಳಕಟ್ಟಿ ಜನ್ಮದಿನ

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಡಾ.ಫ.ಗು.ಹಳಕಟ್ಟಿ ಜನ್ಮದಿನದ ಅಂಗವಾಗಿ ‘ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ’ ಗುರುವಾರ ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷ ಪಿ.ಕಲಾವತಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ, ಮಡಿಕೇರಿ ತಾಲೂಕು ಕದಳಿ ವೇದಿಕೆ ಅಧ್ಯಕ್ಷ ವಿಜಯಲಕ್ಷ್ಮಿ, ಕುಶಾಲನಗರ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಎನ್.ಮೂರ್ತಿ, ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಂಗೀತ ಶಿಕ್ಷಕ ಪುಟ್ಟರಾಜು, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಹನ ಎಸ್.ಹಾದಿಮನಿ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಇತರರು ಪಾಲ್ಗೊಳ್ಳಲಿದ್ದಾರೆ.