ಸಾರಾಂಶ
ಸಿದ್ದರಾಮಯ್ಯ ಅವರ ವಿರುದ್ಧ ದೂರು ನೀಡಿರುವ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರೊಬ್ಬ ದೊಡ್ಡ ಬ್ಲ್ಯಾಕ್ ಮೇಲರ್ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಆರೋಪಿಸಿದ್ದಾರೆ.
- ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ: ಸಚಿವಕನ್ನಡಪ್ರಭ ವಾರ್ತೆ ಗಂಗಾವತಿ
ಸಿದ್ದರಾಮಯ್ಯ ಅವರ ವಿರುದ್ಧ ದೂರು ನೀಡಿರುವ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರೊಬ್ಬ ದೊಡ್ಡ ಬ್ಲ್ಯಾಕ್ ಮೇಲರ್ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಆರೋಪಿಸಿದ್ದಾರೆ. ಹಿಂದೆ ಒಂದು ಪ್ರಕರಣದಲ್ಲಿ ಸುಳ್ಳು ಮಾಹಿತಿ ನೀಡಿದ್ದಕ್ಕಾಗಿ ಅಬ್ರಹಾಂ ಅವರಿಗೆ ಸುಪ್ರೀಂ ಕೋರ್ಟ್ ₹20 ಲಕ್ಷ ದಂಡ ವಿಧಿಸಿತ್ತು. ಈಗಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಸುಳ್ಳು ಅರೋಪ ಮಾಡಿದ್ದಾರೆ ಎಂದರು.----------
ಇದರಲ್ಲಿ ಹುರುಳಿಲ್ಲ. ಈಗಾಗಲೇ ಮುಖ್ಯಮಂತ್ರಿ ರಾಜ್ಯಪಾಲರಿಗೆ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಾನ ಗಟ್ಟಿಯಾಗಿಯೇ ಇದೆ ಎಂದರು.ಈಗಾಗಲೇ ಬಿಜೆಪಿ ಆಡಳಿತಾವಧಿಯಲ್ಲಿ ನಡೆದ 22ಕ್ಕೂ ಹೆಚ್ಚು ಭ್ರಷ್ಟಾಚಾರ ಹಗರಣ ಹೊರ ತೆಗೆದಿದ್ದೇವೆ. ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ, ಜೆಡಿಎಸ್‌ನವರು ಪಾದಯಾತ್ರೆ ನಡೆಸಲಿದ್ದಾರೆ. ಅದರ ಬೆನ್ನಲ್ಲೇ ನಾವೂ ಪಾದಯಾತ್ರೆ ನಡೆಸುತ್ತೇವೆ ಎಂದು ತಂಗಡಗಿ ಹೇಳಿದರು.
ಫೋಟುಃ-2 ಜಿಎನ್ ಜಿ1 ಸಚಿವ ಶಿವರಾಜ ತಂಗಡಗಿ;Resize=(128,128))
;Resize=(128,128))