ಕನ್ನಡಪ್ರಭ ವಾರ್ತೆ ಬೆಳಗಾವಿ ನೆಹರೂ ನಗರದ ಕನ್ನಡ ಭವನ ಹಸ್ತಾಂತರ ಕುರಿತ ವಿವಾದ ತೀವ್ರಗೊಂಡಿದ್ದು, ಭವನವನ್ನು ಕೂಡಲೇ ಸರ್ಕಾರ ವಶಕ್ಕೆ ಪಡೆಯಬೇಕೆಂದು ಆಗ್ರಹಿಸಿ ಕನ್ನಡ ಸಂಘಟನೆಗಳು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದವು. ಸುಮಾರು ₹6.26 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕನ್ನಡ ಭವನವನ್ನು ಖಾಸಗಿ ಸಂಸ್ಥೆಗೆ ಹಸ್ತಾಂತರಿಸುವ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಸಮಾನ ಮನಸ್ಕ ಕನ್ನಡ ಸಂಘಟನೆಗಳ ವೇದಿಕೆ ಆರೋಪಿಸಿದೆ. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಗಡಿ ಅಭಿವೃದ್ಧಿ ಪ್ರಾಧಿಕಾರ ಯಾವುದೇ ಆದೇಶ ನೀಡದಿದ್ದರೂ, ತಪ್ಪು ಮಾಹಿತಿ ನೀಡಿ ಭವನವನ್ನು ಖಾಸಗಿಯವರಿಗೆ ವಹಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ

ಕನ್ನಡಪ್ರಭ ವಾರ್ತೆ ಬೆಳಗಾವಿ

ನೆಹರೂ ನಗರದ ಕನ್ನಡ ಭವನ ಹಸ್ತಾಂತರ ಕುರಿತ ವಿವಾದ ತೀವ್ರಗೊಂಡಿದ್ದು, ಭವನವನ್ನು ಕೂಡಲೇ ಸರ್ಕಾರ ವಶಕ್ಕೆ ಪಡೆಯಬೇಕೆಂದು ಆಗ್ರಹಿಸಿ ಕನ್ನಡ ಸಂಘಟನೆಗಳು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದವು. ಸುಮಾರು ₹6.26 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕನ್ನಡ ಭವನವನ್ನು ಖಾಸಗಿ ಸಂಸ್ಥೆಗೆ ಹಸ್ತಾಂತರಿಸುವ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಸಮಾನ ಮನಸ್ಕ ಕನ್ನಡ ಸಂಘಟನೆಗಳ ವೇದಿಕೆ ಆರೋಪಿಸಿದೆ. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಗಡಿ ಅಭಿವೃದ್ಧಿ ಪ್ರಾಧಿಕಾರ ಯಾವುದೇ ಆದೇಶ ನೀಡದಿದ್ದರೂ, ತಪ್ಪು ಮಾಹಿತಿ ನೀಡಿ ಭವನವನ್ನು ಖಾಸಗಿಯವರಿಗೆ ವಹಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಗಡಿ ಅಭಿವೃದ್ಧಿ ಪ್ರಾಧಿಕಾರವು ಈ ಹಿಂದೆ ಅಧಿಕಾರಿಗಳ ಸಮಿತಿ ರಚಿಸಲು ಸೂಚಿಸಿದ್ದರೂ, ಕಸಾಪ ಅಧ್ಯಕ್ಷರಿಂದ ನೀಡಿದ ಮಾಹಿತಿಯ ಆಧಾರದ ಮೇಲೆ ನ್ಯಾಯಾಲಯದಲ್ಲಿ ತಡೆಯಾಜ್ಞೆ ಜಾರಿಯಾಗಿದೆ. ಮಹಾನಗರ ಪಾಲಿಕೆ ಆಯುಕ್ತರು ನೀಡಿದ ನೋಟಿಸ್‌ಗಳಿಗೆ ಉತ್ತರಿಸದಿರುವ ಹಿನ್ನೆಲೆಯಲ್ಲಿ ಮಂಗಲಾ ಮೆಟಗುಡ್ಡ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ ಸರ್ಕಾರಿ ಸ್ವತ್ತಾದ ಕನ್ನಡ ಭವನವನ್ನು ಜಿಲ್ಲಾಡಳಿತವೇ ಭೌತಿಕವಾಗಿ ವಶಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕನ್ನಡ ಹೋರಾಟಗಾರರಾದ ಮಹಾದೇವ ತಳವಾರ, ವಾಜೀದ ಹಿರೇಕೊಡಿ, ಶ್ರೀನಿವಾಸ ತಾಳೂಕರ, ಮಲ್ಲಪ್ಪ ಗುಡಗೇನಟ್ಟಿ, ಶಿವರಡ್ಡಿ ಹುಚರಡ್ಡಿ, ಈಶ್ವರಗೌಡ ಪಾಟೀಲ, ಬಾಳಪ್ಪ ಗುಡಗೇನಟ್ಟಿ ಮೊದಲಾದವರು ಉಪಸ್ಥಿತರಿದ್ದರು.