ಸಾರಾಂಶ
ನಗರದ ಸಿದ್ಧಗಂಗಾ ವಿದ್ಯಾಸಂಸ್ಥೆಯ ಶಾಲಾ-ಕಾಲೇಜಿನ ಮಕ್ಕಳು ಮತ್ತು ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ಪಾಲಕರು ಸೇರಿ 70ನೇ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿದರು.
ದಾವಣಗೆರೆ: ನಗರದ ಸಿದ್ಧಗಂಗಾ ವಿದ್ಯಾಸಂಸ್ಥೆಯ ಶಾಲಾ-ಕಾಲೇಜಿನ ಮಕ್ಕಳು ಮತ್ತು ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ಪಾಲಕರು ಸೇರಿ 70ನೇ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿದರು.
ಸಿದ್ಧಗಂಗಾ ಪದವಿ ಪೂರ್ವ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಸದಾಶಿವ ಹೊಳ್ಳ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಕರ್ನಾಟಕದ ಹಿರಿಮೆಯನ್ನು ತಿಳಿಸುತ್ತ ನಾಡಿಗಾಗಿ ಶ್ರಮಿಸಿದ ದಿಗ್ಗಜರನ್ನು ಸ್ಮರಿಸಿದರು. ಭಾರತ ಜನನಿಯ ತನುಜಾತೆ ಕರ್ನಾಟಕ ಮಾತೆಯ ವೈಭವವನ್ನು ವರ್ಣಿಸಿದರು.70 ಮಕ್ಕಳಿಂದ ‘ಹಚ್ಚೇವು ಕನ್ನಡ ದೀಪ’ ಗೀತೆಯನ್ನು ಪ್ರಸ್ತುತಪಡಿಸಲಾಯಿತು. ಅಕ್ಕಮಹಾದೇವಿ ಮತ್ತು ಬಸವಣ್ಣನವರ ವಚನಗಳನ್ನು ಸಿ.ಬಿ.ಎಸ್.ಇ ಎಲ್.ಕೆ.ಜಿ. ರಾಘವಿ ಮತ್ತು ಮನಿಷ್ ಗೌಡ ಹೇಳಿದರು. ಒಂದನೇ ತರಗತಿ ರಿಷಿಕ್ ಜ್ಞಾನಪೀಠಪ್ರಶಸ್ತಿ ಪಡೆದ ಕವಿಗಳ ಪರಿಚಯ ಮಾಡಿದರೆ, 2ನೇ ತರಗತಿ ತಾನ್ವಿ ಹರೀಶ್, ನಿದಾ ಫಾತಿಮ ಕಾದಂಬರಿಕಾರ ಎಸ್.ಎಲ್. ಭೈರಪ್ಪನವರ ಪರಿಚಯ ಮಾಡಿಕೊಟ್ಟರು. ಎಲ್.ಕೆ.ಜಿ. ರೇವಂತ್ ಆರ್ಯ ಮತ್ತು 8ನೇ ತರಗತಿ ಓಜಸ್ ರಾಜ್ಯೋತ್ಸವದ ಶುಭಾಶಯ ತಿಳಿಸಿದರು.
ಪುಣಾಣಿ ಮಕ್ಕಳು ‘ಜೋಗದ ಸಿರಿಬೆಳಕಿನಲ್ಲಿ’ ಹಾಡನ್ನು ಹಾಡಿದರು. ಸಿ.ಬಿ.ಎಸ್.ಇ. 6ನೇ ತರಗತಿ ಮಕ್ಕಳು ಬಾರಿಸು ಕನ್ನಡ ಡಿಂಡಿಮ ಮತ್ತು ಕನ್ನಡ ಹೊನ್ನುಡಿ ದೇವಿಯನು ಪೂಜಿಸು ಹಾಡುಗಳಿಗೆ ನೃತ್ಯ ಮಾಡಿದರು. ನಾಡಗೀತೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಸ್ವಾಗತ ಮತ್ತು ವಂದನಾರ್ಪಣೆ ಸಂಸ್ಥೆಯ ಮುಖ್ಯಸ್ಥರಾದ ಜಸ್ಟಿನ್ ಡಿ''''''''ಸೌಜ ಮಾಡಿದರೆ, ಶಿಕ್ಷಕಿ ಆಶಾ ಅಚ್ಚುಕಟ್ಟಾಗಿ ನಿರೂಪಣೆ ಮಾಡಿದರು. ಸಂಸ್ಥೆಯ ಕಾರ್ಯದರ್ಶಿ ಹೇಮಂತ್ ಮತ್ತು ನಿರ್ದೇಶಕ ಡಾ.ಜಯಂತ್ ಭಾಗವಹಿಸಿದ್ದರು.ಮಕ್ಕಳು ಹಳದಿ ಕೆಂಪು ಬಣ್ಣದ ವಸ್ತ್ರಗಳಲ್ಲಿ ಕಂಗೊಳಿಸಿದರು. ಸಂಗೀತ ಶಿಕ್ಷಕರು, ದೈಹಿಕ ಶಿಕ್ಷಕರು ರಾಜ್ಯೋತ್ಸವ ಕಾರ್ಯಕ್ರಮಕ್ಕೆ ವಿಶೇಷ ಕಳೆತಂದರು.
)
;Resize=(128,128))
;Resize=(128,128))