ಕೆಂಪೇಗೌಡ ಜಿಲ್ಲಾ ಮಹಿಳಾ ಒಕ್ಕಲಿಗರ ಸಂಘದ ಕನ್ನಡ ಹಬ್ಬ

| Published : Dec 01 2024, 01:31 AM IST

ಸಾರಾಂಶ

ದೊಡ್ಡಬಳ್ಳಾಪುರ: ಇಲ್ಲಿನ ಕೆಂಪೇಗೌಡ ಜಿಲ್ಲಾ ಮಹಿಳಾ ಒಕ್ಕಲಿಗರ ಸಂಘದ ನೇತೃತ್ವದಲ್ಲಿ ಮುತ್ಯಾಲಮ್ಮ ದೇವಾಲಯದ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.

ದೊಡ್ಡಬಳ್ಳಾಪುರ: ಇಲ್ಲಿನ ಕೆಂಪೇಗೌಡ ಜಿಲ್ಲಾ ಮಹಿಳಾ ಒಕ್ಕಲಿಗರ ಸಂಘದ ನೇತೃತ್ವದಲ್ಲಿ ಮುತ್ಯಾಲಮ್ಮ ದೇವಾಲಯದ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ನಗರಸಭೆ ಸದಸ್ಯೆ ಪ್ರಭಾ ನಾಗರಾಜ್‌ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು, ಕನ್ನಡ ರಾಜ್ಯೋತ್ಸವ ಮನೆ ಮನದ ಹಬ್ಬವಾಗಬೇಕು. ಮಕ್ಕಳಲ್ಲಿ ತಾಯಿನುಡಿಯ ಮಹತ್ವವನ್ನು ಸಾರುವ ಕೆಲಸ ಅಗತ್ಯ. ಮಹಿಳೆಯರು ಕನ್ನಡ ಭಾಷೆಯ ಬೆಳವಣಿಗೆಯಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಕನ್ನಡ ಸಾಹಿತ್ಯ, ಸಂಸ್ಕೃತಿಗೆ ಮಹಿಳೆಯರ ಕೊಡುಗೆ ಅನನ್ಯ ಎಂದರು. ಸಂಘದ ಅಧ್ಯಕ್ಷೆ ಶಾಂತಮ್ಮ, ಗೌರವಾಧ್ಯಕ್ಷರಾದ ರೇವತಿ ಅನಂತರಾಮ್, ಮಂಗಳಾ, ಕಾರ್ಯದರ್ಶಿ ಲಕ್ಷ್ಮಿ, ಖಜಾಂಚಿ ರತ್ನಮ್ಮ, ನಿರ್ದೇಶಕರಾದ ಶೋಭಾ, ರೂಪ, ಮಂಜುಳಾ, ಸಾವಿತ್ರಮ್ಮ, ಆಶಾ ಮತ್ತಿತರರು ಉಪಸ್ಥಿತರಿದ್ದರು.