ಸಾರಾಂಶ
ಎರಡು ಸಾವಿರ ವರ್ಷಗಳ ಪ್ರಾಚೀನ ಇತಿಹಾಸ ಇರುವ ಕನ್ನಡ ಅತ್ಯಂತ ಶ್ರೀಮಂತ ಭಾಷೆ ಎಂದು ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಹೇಳಿದರು.
ಕನ್ನಡ ಪ್ರಭ ವಾರ್ತೆ ಹೊನ್ನಾಳಿ
ಎರಡು ಸಾವಿರ ವರ್ಷಗಳ ಪ್ರಾಚೀನ ಇತಿಹಾಸ ಇರುವ ಕನ್ನಡ ಅತ್ಯಂತ ಶ್ರೀಮಂತ ಭಾಷೆ ಎಂದು ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಹೇಳಿದರು.ಶನಿವಾರ ಪಟ್ಟಣದ ಕನಕರಂಗಮಂದಿರದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಮ್ಮಿಕೊಂಡಿದ್ದ 70ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಹರಿದು ಹಂಚಿಹೋಗಿದ್ದ ಕನ್ನಡ ಭಾಷಿಕರ ಪ್ರದೇಶಗಳನ್ನು ವಿಶಾಲ ಕರ್ನಾಟಕದ ದೃಷ್ಠಿಯಿಂದ ಒಗ್ಗೂಡಿಸಿ ನ.1, 1956 ರಲ್ಲಿ ಮೈಸೂರು ರಾಜ್ಯ ಎಂದು ನಾಮಕರಣ ಮಾಡಲಾಯಿತು. ಅನಂತರ 1973ರ ನ.1ರಂದು ಅದಕ್ಕೆ ಕರ್ನಾಟಕ ರಾಜ್ಯ ಎಂದು ಪುನರ್ ನಾಮಕರಣ ಮಾಡಲಾಯಿತು ಎಂದರು.ತಹಸೀಲ್ದಾರ್ ಸಿ.ರಾಜೇಶ್ ಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಎ.ಗದ್ದಿಗೇಶ್, ಶಿಕಾರಿಪುರ ತಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ. ಕುಬೇರನಾಯ್ಕ, ಪುರಸಭೆಯ ಅಧ್ಯಕ್ಷ ಎ.ಕೆ. ಮೈಲಪ್ಪ ಮಾತನಾಡಿದರು.
ಪಟ್ಟಣದ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ವಿದ್ಯಾರ್ಥಿಗಳು, ಅಧಿಕಾರಿಗಳು, ವಿವಿಧ ಸಂಘ,ಸಂಸ್ಥೆಗಳ ಪದಾಧಿಕಾರಿಗಳು, ಭುವನೇಶ್ವರಿ ದೇವಿಯ ಭಾವಚಿತ್ರದೊಂದಿಗೆ ಕಲಾಮೇಳಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಸಾಗಿದರು.ಪುರಸಭೆ ಮುಖ್ಯಾಧಿಕಾರಿ ಟಿ. ಲೀಲಾವತಿ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಟಿ.ನಿಂಗಪ್ಪ, ತಾಲೂಕು ಕಸಾಪ ಅಧ್ಯಕ್ಷ ಮುರಿಗೆಪ್ಪ ಗೌಡ, ಮಾಜಿ ಸೈನಿಕ ಎಂ.ವಾಸಪ್ಪ, ಪಶು ವೈದ್ಯ ಇಲಾಖೆಯ ನಿವೃತ್ತ ಅಧಿಕಾರಿ ಡಾ.ವಿಶ್ವನಟೇಶ್, ಕರವೇ ಅಧ್ಯಕ್ಷ ವಿನಯ್ ವಗ್ಗರ್, ಮಂಜು ಕಲ್ಕೇರಿ, ಹರೀಶ್, ಯುವಶಕ್ತಿ ಒಕ್ಕೂಟದ ನಾಗರಾಜ್ ಕತ್ತಿಗೆ, ರಾಯಪ್ಪ ಕನ್ನಡಪರ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಇದ್ದರು.
;Resize=(128,128))
;Resize=(128,128))