ಸಾರಾಂಶ
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ರಾಜ್ಯದಲ್ಲಿ ಕನ್ನಡಕ್ಕೇ ಸಾರ್ವಭೌಮ ಸ್ಥಾನ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಂ.ಸಿ ಸುಧಾಕರ್ ಹೇಳಿದರು.ಜಿಲ್ಲಾ ಕೇಂದ್ರದಲ್ಲಿ 17.83 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಕನ್ನಡ ಭವನದ ಉದ್ಘಾಟನಾ ಸಮಾರಂಭದ ಅಂಗವಾಗಿ ಭವನದ ಮುಂಭಾಗದಲ್ಲಿ ಮಂಗಳವಾರ ಬೆಳಗ್ಗೆ ರಾಷ್ಟ್ರಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು.
ನಂತರ ನಾಡ ಧ್ವಜದ ಧ್ವಜಾರೋಹಣವನ್ನು ಶಾಸಕ ಪಿ.ಇ.ಪ್ರದೀಪ್ ಈಶ್ವರ್ ನೆರವೇರಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜದ ಧ್ವಜಾರೋಹಣವನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಕೋಡಿ ರಂಗಪ್ಪ ನೆರವೇರಿಸಿದರು. ಧ್ವಜಾರೋಹಣ ಕಾರ್ಯಕ್ರಮದ ಮೂಲಕ ನೂತನ ಕನ್ನಡ ಭವನದ ಲೋಕಾರ್ಪಣೆ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಾಹಿತ್ಯ ಸಮ್ಮೇಳನದ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಿತು.13 ವರ್ಷದ ಬಳಿಕ ಉದ್ಘಾಟನೆ
ಸುಮಾರು 13 ವರ್ಷಗಳ ಹಿಂದೆ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಒಂದು ಸುಂದರವಾದ ವಿಶಾಲವಾದ ರಂಗ ಮಂದಿರ ನಿರ್ಮಾಣ ಮಾಡಬೇಕು ಎಂಬ ಉದ್ದೇಶದಿಂದ ಮಾಜಿ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ರವರು ರಂಗ ಮಂದಿರಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು. ಅದಾದ ನಂತರ 13 ವರ್ಷಗಳ ಆಮೆ ವೇಗದ ಕಾಮಗಾರಿಯಲ್ಲಿ ನಡೆದ ರಂಗಮಂದಿರಕ್ಕೆ ಕನ್ನಡ ಭವನ ಎಂದು ನಾಮಕರಣಗೊಂಡು ಇಂದು ಲೋಕಾರ್ಪಣೆಗೊಂಡಿದ್ದು ಜಿಲ್ಲೆಯ ಜನತೆಯ ಕನಸು ನನಸಾಗಿದೆ.ಕಸಾಪ ರಾಜ್ಯಾಧ್ಯಕ್ಷರ ಗೈರು ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರವು ರಾಜ್ಯದ ರಾಜಧಾನಿ ಬೆಂಗಳೂರಿಗೆ ಕೇವಲ 56 ಕಿ.ಮೀ ಸಮೀಪದಲ್ಲಿದ್ದರೂ ಸಹ ರಾಜ್ಯಾಧ್ಯಕ್ಷ ನಡೋಜ ಡಾ.ಮಹೇಶ್ ಜೋಶಿ ರವರು ಕನ್ನಡ ಭವನ ಉದ್ಘಾಟನೆ ಗೈರು ಹಾಜರಾಗಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ರಾಷ್ಟ್ರಧ್ವಜ ಆರೋಹಣ ಮಾಡಿದ ನಂತರ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಕನ್ನಡಕ್ಕೆ ಸಾರ್ವಭೌಮ ಸ್ಥಾನ ಎಂದು ಹೇಳಿದರಲ್ಲದೆ ಚಿಕ್ಕಬಳ್ಳಾಪುರದಲ್ಲಿ ಕನ್ನಡ ಭವನ ಲೋಕಾರ್ಪಣೆ ಆಗುತ್ತಿರುವುದು ಅತ್ಯಂತ ಸಂತೋಷದ ವಿಷಯ ಎಂದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪಿ. ಎನ್. ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ,ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಕುಶಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್,ಹೆಚ್ಚುವರಿ ಪೋಲಿಸ್ ವರಿಷ್ಟಾಧಿಕಾರಿಜಗನ್ನಾಥ್ ರೈ, ಉಪ ವಿಭಾಗಾಧಿಕಾರಿ ಅಶ್ವಿನ್,ಡಿವೈಎಸ್ ಪಿ ಶಿವಕುಮಾರ್, ನಗರ ಸಭಾ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು,ಕನ್ನಡ ಸಾಹಿತ್ಯ ಪರಿಷತ್ ನ ಪದಾಧಿಕಾರಿಗಳು, ಆಜೀವ ಸದಸ್ಯರು, ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಮುಖಂಡರು, ಕನ್ನಡಾಭಿಮಾನಿಗಳು ,ಸಾಹಿತ್ಯಾಸಕ್ತರು, ಸರ್ಕಾರೇತರ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.