ಸಾರಾಂಶ
ಕನ್ನಡ ಭಾಷೆ ಮಾತನಾಡುವುದು, ಬರೆಯುವುದು, ಕನ್ನಡದಲ್ಲೇ ವ್ಯವಹಾರ ನಡೆಸುವದನ್ನು ನಾವು ಕಲಿಯಬೇಕಾಗಿದೆ. ಕನ್ನಡ ಸಂಸ್ಕೃತಿ, ಆಚಾರ, ವಿಚಾರ ಉಳಿಸಿ, ಬೆಳೆಸುವ ಕಡೆ ಹೆಚ್ಚು ಒತ್ತು ಕೊಡಬೇಕು .
ಕನ್ನಡಪ್ರಭ ವಾರ್ತೆ ಗುಬ್ಬಿ
ರಾಷ್ಟ್ರದಲ್ಲೇ ಕನ್ನಡ ಭಾಷೆಗೆ ತನ್ನದೇ ಆದ ಹಿನ್ನೆಲೆ ಇದ್ದು, ಎಂಟು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದ ಏಕೈಕ ಭಾಷೆ ಕನ್ನಡ ಭಾಷೆ ಆಗಿದೆ ಎಂದು ಶಾಸಕ ಎಸ್. ಆರ್. ಶ್ರೀನಿವಾಸ್ ತಿಳಿಸಿದರು.ತಾಲೂಕು ಕಚೇರಿಯ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪಟ್ಟಣದಲ್ಲಿ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಪ್ರತಿ ವರ್ಷವೂ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸುತ್ತಾ ಬಂದಿದ್ದು, ಕನ್ನಡಿಗರು ಇಂಗ್ಲೀಷ್ ವ್ಯಾಮೋಹಕ್ಕೆ ಒಳಗಾಗಿ ಕನ್ನಡ ಶಾಲೆಗಳನ್ನು ಮುಚ್ಚುವ ಸ್ಥಿತಿ ಇಂದು ನಿರ್ಮಾಣ ಆಗುತ್ತಿರುವುದು ಕಳವಳಕಾರಿ ಸಂಗತಿ. ಉದ್ಯೋಗಕ್ಕಾಗಿ ಇಂಗ್ಲೀಷ್ ಭಾಷೆಯನ್ನು ಮಾತನಾಡಿ. ಆದರೆ, ಮಾತೃ ಭಾಷೆಯನ್ನು ಉಳಿಸಲು ಕನ್ನಡ ಮಾಧ್ಯಮ ಶಾಲೆಗಳಿಗೆ ಆದ್ಯತೆ ನೀಡುವಂತೆ ಕರೆ ನೀಡಿದರು.
ತಹಸೀಲ್ದಾರ್ ಆರತಿ ಬಿ. ಮಾತನಾಡಿ, ಕನ್ನಡ ಭಾಷೆ ಮಾತನಾಡುವುದು, ಬರೆಯುವುದು, ಕನ್ನಡದಲ್ಲೇ ವ್ಯವಹಾರ ನಡೆಸುವದನ್ನು ನಾವು ಕಲಿಯಬೇಕಾಗಿದೆ. ಕನ್ನಡ ಸಂಸ್ಕೃತಿ, ಆಚಾರ, ವಿಚಾರ ಉಳಿಸಿ, ಬೆಳೆಸುವ ಕಡೆ ಹೆಚ್ಚು ಒತ್ತು ಕೊಡಬೇಕು ಎಂದು ತಮ್ಮ ಸಂದೇಶದಲ್ಲಿ ತಿಳಿಸಿದರು.ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆ, ಶಾಲಾ ಮಕ್ಕಳಿಂದ ಧ್ವಜ ವಂದನೆ ಸ್ವೀಕಾರ ಹಾಗೂ ಕವಾಯತ್ ಮೂಡಿಬಂತು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.
ತಾಪಂ ಇಒ ಶಿವಪ್ರಕಾಶ್, ಪಪಂ ಅಧ್ಯಕ್ಷೆ ಮಂಗಳಮ್ಮ, ಉಪಾಧ್ಯಕ್ಷೆ ಮಮತಾ, ಕಸಾಪ ಅಧ್ಯಕ್ಷ ಯತೀಶ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್, ಪಪಂ ಮುಖ್ಯಾಧಿಕಾರಿ ಮಂಜುಳಾ ದೇವಿ , ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಜಗದೀಶ್, ಸರ್ಕಲ್ ಇನ್ಸ್ಪೆಕ್ಟರ್ ಗೋಪಿನಾಥ್, ಕಂದಾಯ ನಿರೀಕ್ಷಕ ಎಸ್ ಕುಮಾರ್, ಪಪಂ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.;Resize=(128,128))
;Resize=(128,128))