ಸಾರಾಂಶ
ಪಟ್ಟಣಕ್ಕೆ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ ಕೋರಲಾಯಿತು.
ಹಾರೋಹಳ್ಳಿ: ಪಟ್ಟಣಕ್ಕೆ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ ಕೋರಲಾಯಿತು.
ಪಟ್ಟಣದ ಚಾಮುಂಡೇಶ್ವರಿ ದೇವಸ್ಥಾನ ಆವರಣದಲ್ಲಿ ವಿವಿಧ ಜಾನಪದ ಕಲಾತಂಡಗಳ ಪ್ರದರ್ಶನ ಆಯೋಜಿಸಲಾಗಿತ್ತು. ವಿವಿಧ ಶಾಲೆಗಳ ವಿದ್ಯಾರ್ಥಿಗಳು ಕನ್ನಡ ಬಾವುಟ ಹಿಡಿದು ಮೆರವಣಿಗೆಗೆ ಮೆರುಗು ನೀಡಿದರು. ವೀರಗಾಸೆ, ಡೊಳ್ಳು ಕುಣಿತ, ತಮಟೆ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಕನ್ನಡ ರಥಯಾತ್ರೆ ಪಟ್ಟಣದ ವಿವಿಧೆಡೆ ಸಂಚಾರ ಮಾಡಿತು. ಇದೇ ವೇಳೆ ಮಹಿಳೆಯರು ಮಂಗಲ ಕಲಶ ಹೊತ್ತು ರಥಯಾತ್ರೆಗೆ ಪೂಜೆ ಸಲ್ಲಿಸಿದರು. ಭುವನೇಶ್ವರಿ ಮಾತೆಗೆ ಹೂವು ಎಸೆಯುವ ಮೂಲಕ ರಥವನ್ನು ರಥವನ್ನು ಸ್ವಾಗತಿಸಿದರು. ತಹಸೀಲ್ದಾರ್ ಶಿವಕುಮಾರ್.ಆರ್.ಸಿ ಮಾತನಾಡಿ, 2023ರ ನ. 2ರಂದು ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ಈ ರಥ ಯಾತ್ರೆಗೆ ಚಾಲನೆ ನೀಡಿದ್ದು, ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷಗಳು ಪೂರ್ಣಗೊಂಡ ಅಂಗವಾಗಿ ರಥಯಾತ್ರೆಯು ರಾಜ್ಯದ ಎಲ್ಲ ಕಡೆ ಸಂಚರಿಸಲಿದೆ ಎಂದರು.ಇಂದಿನ ಆಧುನಿಕ ಯುಗದಲ್ಲಿ ಮಕ್ಕಳು ಮತ್ತು ಯುವಜನರಲ್ಲಿ ನಮ್ಮ ರಾಜ್ಯದ ನೆಲ, ಜಲ, ಭಾಷೆ, ಗಡಿ, ಕರ್ನಾಟಕದ ಗತ ವೈಭವದ ಇತಿಹಾಸದ ಜ್ಞಾನ ಕಡಿಮೆಯಾಗುತ್ತಿದೆ. ಕನ್ನಡ ನಾಡು ದೇಶದಲ್ಲಿಯೇ ಅತ್ಯಂತ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿರುವ ರಾಜ್ಯವಾಗಿದ್ದು, ಇಲ್ಲಿನ ಗತೈಭವವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದರು. ಪಪಂ ಮುಖ್ಯಾಧಿಕಾರಿ ಶ್ವೇತಾಬಾಯಿ, ಜಿ.ಗೋವಿಂದಯ್ಯ, ಬೆಣಚಕಲ್‌ದೊಡ್ಡಿ ರುದ್ರೇಶ್, ರಾಜು ಕೋಟೆ, ಕಾಳಮ್ಮ ಹಾಜರಿದ್ದರು.