ಸಾರಾಂಶ
ಅಂಕೋಲಾ: ಕರ್ನಾಟಕ ಸುವರ್ಣ ಸಂಭ್ರಮದ ಹಿನ್ನೆಲೆ ದುಡಿದವರ ನೆನಪಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ. ಯುವ ಜನಾಂಗ ಉತ್ತಮವಾದ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ಇಲ್ಲದಿದ್ದರೆ ಕನ್ನಡ ನಾಡಿಗೆ ತುಂಬಾ ಅಪಾಯವಿದೆ ಎಂದು ಕಸಾಪ ತಾಲೂಕಾಧ್ಯಕ್ಷ ಗೋಪಾಲಕೃಷ್ಣ ನಾಯಕ ಆತಂಕ ವ್ಯಕ್ತಪಡಿಸಿದರು.ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕಸಾಪ ಜಿಲ್ಲಾ ಘಟಕ, ತಾಲೂಕು ಘಟಕದ ಹಾಗೂ ಸರ್ಕಾರಿ ಪಪೂ ಕಾಲೇಜಿನ ಸಹಯೋಗದಲ್ಲಿ ಹಮ್ಮಿಕೊಂಡ ಕನ್ನಡ ಕಾರ್ತಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕಾರ್ಯಕ್ರಮವನ್ನು ಉದ್ಘಾಟಿಸಿದ ನ್ಯಾಯವಾದಿ ಉಮೇಶ ನಾಯ್ಕ ಮಾತನಾಡಿ, ಕನ್ನಡ ಕಾರ್ತಿಕ ಕಾರ್ಯಕ್ರಮ ತುಂಬಾ ಅರ್ಥಪೂಣವಾಗಿದ್ದು, ವಿದ್ಯಾರ್ಥಿಗಳೆಲ್ಲರೂ ಕನ್ನಡ ಕಟ್ಟುವ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು ಎಂದರು.ಉಪನ್ಯಾಸಕ ಮಹೇಶ ನಾಯಕ ಮಾತನಾಡಿ, ನಾಡು- ನುಡಿಯ ಗತವೈಭವದ ಬಗ್ಗೆ ಮಾಹಿತಿ ನೀಡಿದರು. ಜಿ.ಆರ್. ತಾಂಡೇಲ ಮಾತನಾಡಿದರು. ಡಾ. ಪುಷ್ಪಾ ನಾಯ್ಕ ಸ್ವಾಗತಿಸಿದರು. ಮಾದೇವ ಆಗೇರ ವಂದಿಸಿದರು. ತಿಮ್ಮಣ್ಣ ಭಟ್ ನಿರೂಪಿಸಿದರು. ಜೆ. ಪ್ರೇಮಾನಂದ ಮತ್ತು ರಫೀಕ ಶೇಖ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ‘ಹಚ್ಚೇವು ಕನ್ನಡದ ದೀಪ’ ಹಾಡನ್ನು ಪ್ರಸ್ತುತಪಡಿಸಿದರು.ಇಂದು ಕನ್ನಡ ಕಾರ್ತಿಕ ಉಪನ್ಯಾಸ ಕಾರ್ಯಕ್ರಮ
ಯಲ್ಲಾಪುರ: ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಹಾಗೂ ಸರ್ಕಾರಿ ಪ್ರಥಮದರ್ಜೆ ಕಾಲೇಜು, ಕನ್ನಡ ವಿಭಾಗ ಮತ್ತು ಸಾಹಿತ್ಯ ವೇದಿಕೆಯ ಆಶ್ರಯದಲ್ಲಿ ಕನ್ನಡ ಕಾರ್ತಿಕ, ಅನುದಿನ ಅನುಸ್ಪಂದನ ಉಪನ್ಯಾಸ ಕಾರ್ಯಕ್ರಮವನ್ನು ನ. ೭ರಂದು ಬೆಳಗ್ಗೆ ೧೦.೩೦ ಗಂಟೆಗೆ ಪಟ್ಟಣದ ಸ.ಪ್ರ.ದ. ಕಾಲೇಜಿನಲ್ಲಿ ಏರ್ಪಡಿಸಲಾಗಿದೆ.
ಕಾರ್ಯಕ್ರಮವನ್ನು ಪ್ರಾಂಶುಪಾಲ ಡಾ. ಆರ್.ಡಿ. ಜನಾರ್ದನ ಉದ್ಘಾಟಿಸುವರು. ತಾಲೂಕು ಕಸಾಪ ಅಧ್ಯಕ್ಷ ವಿ. ಸುಬ್ರಹ್ಮಣ್ಯ ಭಟ್ಟ ಅಧ್ಯಕ್ಷತೆ ವಹಿಸುವರು. ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಮುಕ್ತಾ ಶಂಕರ ಉಪನ್ಯಾಸ ನೀಡಲಿದ್ದಾರೆ ಎಂಗು ಕಸಾಪ ತಾಲೂಕಾಧ್ಯಕ್ಷ ಸುಬ್ರಹ್ಮಣ್ಯ ಭಟ್ಟ ತಿಳಿಸಿದ್ದಾರೆ.