ಸಾರಾಂಶ
ಹುಲಸೂರ: ಕನ್ನಡ ನಾಡಿನಲ್ಲಿ ಕನ್ನಡ ಭಾಷೆಯನ್ನು ಆಡಳಿತದ ವ್ಯವಹಾರ ಮತ್ತು ಸಾರ್ವಜನಿಕ ಸಂಪರ್ಕ ಭಾಷೆಯಾಗಿ ಕಡ್ಡಾಯವಾಗಿ ಬಳಕೆ ಮಾಡಬೇಕು. ಈ ನಾಡಿನಲ್ಲಿ ಕನ್ನಡ ಭಾಷೆಯೇ ಸಾರ್ವಭೌಮ ಎಂದು ತಹಸೀಲ್ದಾರ್ ಶಿವಾನಂದ ಮೇತ್ರೆ ತಿಳಿಸಿದರು.
ಹುಲಸೂರ: ಕನ್ನಡ ನಾಡಿನಲ್ಲಿ ಕನ್ನಡ ಭಾಷೆಯನ್ನು ಆಡಳಿತದ ವ್ಯವಹಾರ ಮತ್ತು ಸಾರ್ವಜನಿಕ ಸಂಪರ್ಕ ಭಾಷೆಯಾಗಿ ಕಡ್ಡಾಯವಾಗಿ ಬಳಕೆ ಮಾಡಬೇಕು. ಈ ನಾಡಿನಲ್ಲಿ ಕನ್ನಡ ಭಾಷೆಯೇ ಸಾರ್ವಭೌಮ ಎಂದು ತಹಸೀಲ್ದಾರ್ ಶಿವಾನಂದ ಮೇತ್ರೆ ತಿಳಿಸಿದರು.ಮಂಡ್ಯದಲ್ಲಿ ಡಿ. 20ರಂದು ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ಕನ್ನಡ ಜ್ಯೋತಿ ಹೊತ್ತ ರಥಯಾತ್ರೆ ತಾಲೂಕಿನ ಬೇಲೂರು ಗ್ರಾಮಕ್ಕೆ ಶನಿವಾರ ಆಗಮಿಸಿದ ಸಂದರ್ಭದಲ್ಲಿ, ಜೆಸಿಬಿ ಮೂಲಕ ಹೂವು ಮಳೆ ಸುರಿಸಿ ವಾದ್ಯ ಸಂಗೀತ ನೃತ್ಯದ ಮೂಲಕ ಬರ ಮಾಡಿಕೊಂಡ ನಂತರ ಅವರು ಮಾತನಾಡಿದರು. ರಾಜ್ಯದಲ್ಲಿ ಗಡಿ ತಾಲೂಕು ಹುಲಸೂರ ಗ್ರಾಮಗಳ ಸುತ್ತಲೂ ಇತರೆ ಭಾಷೆಗಳ ಬಳಕೆ ಮಾಡುವವರು ಇದ್ದರೂ, ಆಡಳಿತ ವ್ಯವಹಾರ ಮತ್ತು ಸಾರ್ವಜನಿಕ ಸಂಪರ್ಕಕ್ಕೆ ಕನ್ನಡ ಭಾಷೆ ಬಳಕೆ ಮಾಡುವುದು ಉತ್ತಮ ಎಂದು ತಿಳಿಸಿದರು.ಕಸಾಪ ತಾಲೂಕು ಅಧ್ಯಕ್ಷ ನಾಗರಾಜ ಹಾವಣ್ಣ ಮಾತನಾಡಿ, ಗಡಿಭಾಗದಲ್ಲಿನ ಜನರು ಕನ್ನಡ ಭಾಷೆಯ ಬಳಕೆ ಮಾಡುವ ಮೂಲಕ ಕನ್ನಡ ಭಾಷೆಯ ಬೆಳವಣಿಗೆಯಾಗುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ ಮಾತನಾಡಿ, ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಮ್ಮ ಜಿಲ್ಲೆಯ ಕನ್ನಡ ಭಾಷೆಯ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದವೀರಯ್ಯ ರುದನೂರ, ಇಒ. ವೈಜಣ್ಣ ಫುಲೆ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಭೀಮಾಶಂಕರ ಆದೆಪ್ಪ, ರಾಜ್ಯ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಸೂರ್ಯಕಾಂತ ಅಡಿಕೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ರಾಜಪ್ಪ ನಂದೋಡೆ, ಸೂರ್ಯಕಾಂತ ಪಾಟೀಲ್, ಕಸಾಪ ಕೋಶಾಧ್ಯಕ್ಷರಾದ ಶಿವಶಂಕರ ಟೋಕರೆ, ಬಸವರಾಜ ಗುಂಗೆ, ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಸೂರ್ಯಕಾಂತ ಚಿಲ್ಲಾಬಟೆ, ಮಹಾದೇವ ಮಹಾಜನ, ಅನೀಲ ಪರೆಪ್ಪ, ಪಪ್ಪು ಉದಾನೆ, ಸಿದ್ರಾಮ ಕಾಮಣ್ಣ, ದೀಪಕ ಪಾಟೀಲ್, ಧರ್ಮೇಂದ್ರ ಭೊಸ್ಲೆ, ಮಾರುತಿ ಬೇಂದ್ರೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿ, ಮಹಿಳೆಯರು ಮಕ್ಕಳು ಪಾಲ್ಗೊಂಡಿದ್ದರು .