ಸಾರಾಂಶ
ರಾಜ್ಯದಲ್ಲಿ ನೆಲೆಸಿರುವ ಪ್ರತಿಯೊಬ್ಬರಿಗೂ ಕನ್ನಡ ಭಾಷೆಯು ಸ್ವಾಭಿಮಾನದ ಸಂಕೇತವಾಗಬೇಕು. ಅಭಿಮಾನ ಶೂನ್ಯತೆ ಹಾಗೂ ಇಚ್ಛಾಶಕ್ತಿ ಕೊರತೆ ಕಾರಣ ಕನ್ನಡ ಭಾಷೆಯ ಆತಂಕದಲ್ಲಿದ್ದು, ಇನ್ನಾದರೂ ಕನ್ನಡದ ಹಿಂದಿನ ಗತವೈಭವ ಮರಳಿಸಲು ಪ್ರಯತ್ನಿಸೋಣ ಎಂದು ಪುರಸಭೆ ಅಧ್ಯಕ್ಷ ಬಾಲಚಂದ್ರಗೌಡ ಪಾಟೀಲ ಕರೆ ನೀಡಿದರು.
ಬ್ಯಾಡಗಿ:ರಾಜ್ಯದಲ್ಲಿ ನೆಲೆಸಿರುವ ಪ್ರತಿಯೊಬ್ಬರಿಗೂ ಕನ್ನಡ ಭಾಷೆಯು ಸ್ವಾಭಿಮಾನದ ಸಂಕೇತವಾಗಬೇಕು. ಅಭಿಮಾನ ಶೂನ್ಯತೆ ಹಾಗೂ ಇಚ್ಛಾಶಕ್ತಿ ಕೊರತೆ ಕಾರಣ ಕನ್ನಡ ಭಾಷೆಯ ಆತಂಕದಲ್ಲಿದ್ದು, ಇನ್ನಾದರೂ ಕನ್ನಡದ ಹಿಂದಿನ ಗತವೈಭವ ಮರಳಿಸಲು ಪ್ರಯತ್ನಿಸೋಣ ಎಂದು ಪುರಸಭೆ ಅಧ್ಯಕ್ಷ ಬಾಲಚಂದ್ರಗೌಡ ಪಾಟೀಲ ಕರೆ ನೀಡಿದರು.
ಕನ್ನಡ ರಾಜ್ಯೋತ್ಸವ ಅಂಗವಾಗಿ ಪಟ್ಟಣದ ಗುಮ್ಮನಹಳ್ಳಿ ರಸ್ತೆ ಬಳಿಯಲ್ಲಿನ ಟ್ಯಾಕ್ಸಿ ಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ ಏರ್ಪಡಿಸಿದ್ದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.ಮಾತೃಭಾಷೆ ಕುರಿತು ತಪ್ಪು ವಿವರಣೆ ನೀಡಲಾಗುತ್ತಿದ್ದು ಅದನ್ನು ತಿರುಚಲಾಗುತ್ತಿದ್ದು ತನ್ಮೂಲಕ ಕನ್ನಡಭಾಷೆಯನ್ನು ಹತ್ತಿ ಕ್ಕಲಾಗುತ್ತಿದೆ. ಕಾನೂನಿಗೆ ಸೂಕ್ತ ತಿದ್ದುಪಡಿ ತರುವ ಮೂಲಕ ಕನ್ನಡ ಭಾಷೆಯನ್ನು ರಾಜ್ಯಭಾಷೆಯನ್ನಾಗಿ ಪರಿವರ್ತಿಸಿ ರಾಜ್ಯದಲ್ಲಿ ನೆಲೆಸಿರುವ ಪ್ರತಿಯೊಬ್ಬರೂ ಕನ್ನಡಭಾಷೆ ಕಲಿಕೆ ಕಡ್ಡಾಯಗೊಳಿಸಬೇಕು ಮತ್ತು ತಮ್ಮ ಮಕ್ಕಳಿಗೂ ಕನ್ನಡ ಭಾಷೆಯನ್ನು ಕಲಿಯುವಂತೆ ನೋಡಿಕೊಳ್ಳುವಂತೆ ಮಾಡಬೇಕಾಗಿದೆ ಎಂದರು.
ಪುರಸಭೆ ಉಪಾಧ್ಯಕ್ಷ ಸುಭಾಸ ಮಾಳಗಿ ಮಾತನಾಡಿ, ಕನ್ನಡ, ಇದೊಂದು ಭಾಷೆ ಎನ್ನುವುದಕ್ಕಿಂತ 2 ಸಾವಿರ ವರ್ಷಗಳ ಇತಿಹಾಸ ಹೊಂದಿದ್ದು ರಾಜ್ಯದ ಸಂಸ್ಕೃತಿಯಾಗಿದೆ. ಇದನ್ನು ಅರಿತು ಕನ್ನಡಿಗರು ಕನ್ನಡದ ಅಸ್ಮಿತೆ ಉಳಿಸಬೇಕಾಗಿದೆ ಎಂದರು. ಈ ವೇಳೆ ರವಿ ಹುಣಸೀಮರದ, ಸಲೀಮ್ ಯಾದವಾಡ, ಗಿರೀಶ ಇಂಡಿಮಠ ಸೇರಿದಂತೆ ಟ್ಯಾಕ್ಸಿ ಚಾಲಕ ಹಾಗೂ ಮಾಲಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.