ಸಾರಾಂಶ
ಕಸಬಾ ಹೋಬಳಿ ಘಟಕ ಸೇವಾ ದೀಕ್ಷೆ ಸಮಾರಂಭ । ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ
ಕನ್ನಡಪ್ರಭ ವಾರ್ತೆ, ತರೀಕೆರೆಕನ್ನಡ ಭಾಷೆಯನ್ನು ನಾವೆಲ್ಲರೂ ಬಳಸುವ ಮೂಲಕ ಉಳಿಸಬೇಕು ಎಂದು ತರೀಕೆರೆ ಜಿ.ಎಚ್.ಶ್ರೀನಿವಾಸ್ ಜನಹಿತ ಸೇವಾ ಟ್ರಸ್ಟ್ ಅಧ್ಯಕ್ಷೆ ವಾಣಿ ಶ್ರೀನಿವಾಸ್ ಕರೆನೀಡಿದರು.
ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕ ತರೀಕೆರೆಯಿಂದ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಸಬಾ ಹೋಬಳಿ ಘಟಕ ಸೇವಾ ದೀಕ್ಷೆ ಸಮಾರಂಭದಲ್ಲಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಘಟಕದ ಕಾರ್ಯಕ್ರಮಗಳಿಗೆ ತಾವು ಸಹಕಾರ ನೀಡುವುದಾಗಿ ತಿಳಿಸಿದರು.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ನಾಡಿನ ನೆಲ ಜಲ ಮತ್ತು ಸಂಸ್ಕೃತಿಯನ್ನು ಸಂರಕ್ಷಣೆ ಮಾಡುತ್ತಿದೆ. ರಾಜ್ಯದ ವಿವಿಧ ಸಂಸ್ಥೆಗಳಲ್ಲಿ ಕನ್ನಡಿ ಗರಿಗೆ ಉದ್ಯೋಗಾವಕಾಶ ಕೊಡಬೇಕು, ಐಟಿಬಿಟಿ ಕಂಪನಿಗಳಲ್ಲಿ ಬೇರೆಯವರು ಉದ್ಯೋಗದಲ್ಲಿದ್ದಾರೆ. ಶೇ.80ರಷ್ಟು ಉದ್ಯೋಗ ಕನ್ನಡಿಗರಿಗೆ ಕೊಡಬೇಕು. ನಮಗೆ ನ್ಯಾಯ ಒದಗಿಸಿಕೊಡಬೇಕು. ಭಾಷೆ ಉಳಿದರೆ ಸಂಸ್ಕೃತಿ ಉಳಿಯುತ್ತದೆ. ಗ್ರಾಮಾಂತರ ಪ್ರದೇಶಗಳಲ್ಲಿ ಇಂದಿಗೂ ಬಂಧುತ್ವ ಉಳಿದಿದೆ ಎಂದು ಹೇಳಿದರು.
ಪುರಸಭೆ ಮಾಜಿ ಅಧ್ಯಕ್ಷ ಟಿ.ಎಸ್.ಪ್ರಕಾಶ್ ವರ್ಮ ಮಾತನಾಡಿ ಕಸಾಪ ಹೋಬಳಿ ಘಟಕದ ನೂತನ ಅಧ್ಯಕ್ಷ ಟಿ.ಎನ್. ಜಗದೀಶ್ ಅವರು ಅನೇಕ ಕನ್ನಡಪರ ಸಂಘಟನೆಗಳಲ್ಲಿ ಮತ್ತು ಜಯಕರ್ನಾಟಕ ಸಂಘಟನೆಯಲ್ಲಿ ಸೇವೆ ಸಲ್ಲಿಸಿದ್ದಾರೆ ಹಾಗೂ ಸಾರ್ವಜನಿಕ ಸೇವೆಯಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಬೇಕು. ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಂತೆ ಮನವಿ ಮಾಡಿದರು.ಚಿಕ್ಕಮಗಳೂರು ಕಸಾಪ ಜಿಲ್ಲಾ ಸಂಚಾಲಕ ಇಮ್ರಾನ್ ಆಹಮದ್ ಬೇಗ್ ಮಾತನಾಡಿ ಕಸಬಾ ಹೋಬಳಿ ಘಟಕ ಸೇವಾ ದೀಕ್ಷೆ ಸಮಾರಂಭ ಕನ್ನಡ ಸಾಹಿತ್ಯ ಪರಿಷತ್ತಿಗೆ ಹೆಮ್ಮೆ ತಂದಿದೆ. ಹೋಬಳಿ ಘಟಕದ ನೂತನ ಅಧ್ಯಕ್ಷ ಟಿ.ಎನ್.ಜಗದೀಶ್ ಸಾಮಾಜಿಕ ಕಳಕಳಿ ಹೊಂದಿದ್ದಾರೆ. ಕನ್ನಡ ನೆಲ ಜಲ ಉಳಿಸಲು ಅನೇಕ ಹೋರಾಟ ಮಾಡಿದ್ದಾರೆ. ಈಗಿರುವಂತಹ ಪರಿಸ್ಥಿತಿಯಲ್ಲಿ ಕನ್ನಡದ ಸಂರಕ್ಷಣೆಗೆ ಚಳುವಳಿ ಎದುರಾಗುವ ಸಂಭವವಿದ್ದು ಇಂತಹ ಹೋರಾಟಗಾರರು ಸಾಹಿತ್ಯ ಕ್ಷೇತ್ರಕ್ಕೆ ಆಗಮಿಸಿರುವುದು ಸ್ವಾಗತಾರ್ಹ ಎಂದರು.
ಕಸಬಾ ಹೋಬಳಿ ಘಟಕದ ನೂತನ ಅಧ್ಯಕ್ಷ ಟಿ.ಎನ್.ಜಗದೀಶ್ ಪರಿಷತ್ತಿನ ಧ್ವಜ ಸ್ವೀಕರಿಸಿ ಮಾತನಾಡಿ ಕನ್ನಡ ಸೇವೆ ಮಾಡಲು ಅವಕಾಶ ದೊರೆತಿರಿವುದು ಸಂತೋಷ ತಂದಿದೆ. ಕಳೆದ 15 ವರ್ಷಗಳಿಂದ ಕನ್ನಡ ಪರ ಸಂಘಟನೆಗಳಲ್ಲಿ ಸೇವೆ ಸಲ್ಲಿಸಿದ್ದೇನೆ. ಶಾಸಕ ಜಿ.ಎಚ್.ಶ್ರೀನಿವಾಸ್ ಕನ್ನಡ ಜಾಗೃತಿ ಬಗ್ಗೆ ನಮಗೆ ಅನೇಕ ಸಲಹೆ ಸಹಕಾರ ನೀಡುತ್ತಿದ್ದಾರೆ. ಪ್ರಾಮಾಣಿಕವಾಗಿ ಕನ್ನಡ ನಾಡು ನುಡಿ ರಕ್ಷಣೆ ಮತ್ತು ಸೇವೆ ಮಾಡುತ್ತೇನೆ. ಯುವಶಕ್ತಿಗೆ ಹೆಚ್ಚು ಅವಕಾಶ ಕೊಡಬೇಕು ಎಂದು ಹೇಳಿದರು.ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷ ರವಿ ದಳವಾಯಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಘಟಕದ ನೂತನ ಅಧ್ಯಕ್ಷರಾಗಿ ಟಿ.ಎನ್.ಜಗದೀಶ್ ಪರಿಷತ್ತಿನ ಧ್ವಜ ಸ್ವೀಕರಿಸಿ ರುವುದು ಎಲ್ಲರಿಗೂ ಸಂತೋಷ ತಂದಿದೆ. ತಾಂತ್ರಿಕ ಶಿಕ್ಷಣ ರಾಜ್ಯದಲ್ಲಿ ಹೆಚ್ಚಾಗಿದೆ. ಟಿ.ಎನ್.ಜಗದೀಶ್ ಅವರಿಗೆ ಸಂಘಟನಾ ಚತುರತೆ ಇದೆ ಎಂದು ಹೇಳಿದರು.
ಜಿಲ್ಲಾ ಕಸಾಪ ಗೌ.ಕಾರ್ಯದರ್ಶಿ ಹಾಗೂ ವಕೀಲರು ಎಸ್.ಎಸ್.ವೆಂಕಟೇಶ್ ಪ್ರತಿಜ್ಞಾ ವಿಧಿ ಬೋಧಿಸಿದರು. ಮುಖಂಡರಾದ ವೆಂಕಟೇಶ್, ಮಹಮದ್ ಇರ್ಣಾದ್, ದೇವರಾಜ್, ವೀರಮಣಿ ಸೀತಾಪುರ ಕಾವಲ್, ಮತ್ತಿತರರು ಸಮಾರಂಭದಲ್ಲಿ ಭಾಗವಹಿಸಿದ್ದರು.20ಕೆಟಿಆರ್.ಕೆ.1ಃ
ತರೀಕೆರೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದಿಂದ ನಡೆದ ಕಸಬಾ ಹೋಬಳಿ ಘಟಕ ಸೇವಾ ದೀಕ್ಷೆ ಸಮಾರಂಭದಲ್ಲಿ ಜಿ.ಎಚ್.ಶ್ರೀನಿವಾಸ್ ಜನಹಿತ ಸೇವಾ ಟ್ರಸ್ಟ್ ಅಧ್ಯಕ್ಷೆವಾಣಿ ಶ್ರೀನಿವಾಸ್ ಅವರು ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು. ಜಿಲ್ಲಾ ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್, ಕಸಾದ ತಾಲೂಕು ಘಟಕದ ಅಧ್ಯಕ್ಷ ರವಿ ದಳವಾಯಿ, ಕಸಬಾ ಹೋಬಳಿ ಘಟಕದ ನೂತನ ಅಧ್ಯಕ್ಷ ಟಿ.ಎನ್.ಜಗದೀಶ್ , ಕಸಾಪ ಜಿಲ್ಲಾ ಸಂಚಾಲಕ ಇಮ್ರಾನ್ ಆಹಮದ್ ಬೇಗ್. ಟಿ.ಎಸ್.ಪ್ರಕಾಶ್ ವರ್ಮ ಮತ್ತಿತರರು ಇದ್ದರು.--------------------