ಸಾರಾಂಶ
ಕನ್ನಡಪ್ರಭ ವಾರ್ತೆ ಬೆಂಗಳೂರುಸಕ್ಕರೆ ನಾಡು ಮಂಡ್ಯದಲ್ಲಿ ಜೂನ್ ತಿಂಗಳಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ಮುಖ್ಯಮಂತ್ರಿಯವರು ಸೂಚನೆ ನೀಡಿದ್ದರ ಹಿನ್ನೆಲೆಯಲ್ಲಿ ಜೂ.7, 8 ಮತ್ತು 9ರಂದು ಸಮ್ಮೇಳನ ಆಚರಿಸಲು ಕನ್ನಡ ಸಾಹಿತ್ಯ ಪರಿಷತ್ತು ತೀರ್ಮಾನಿಸಿದೆ. ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ನಡೆಯಿತು. ಈ ಸಂದರ್ಭದಲ್ಲಿ ಸಮ್ಮೇಳನವನ್ನು ಅದ್ಧೂರಿ ಎನ್ನುವುದಕ್ಕಿಂತ ಅರ್ಥಪೂರ್ಣವಾಗಿ ಆಚರಿಸಬೇಕು. ಕನ್ನಡ ಸಂಘಟನೆಗಳನ್ನು ವಿಶ್ವಾಸಕ್ಕೆ ಪಡೆದು, ಜಿಲ್ಲಾಡಳಿತದ ಸಹಕಾರದೊಂದಿಗೆ ಜೂನ್ ಮೊದಲನೇ ವಾರದಲ್ಲಿ ಸಮ್ಮೇಳನ ಆಯೋಜಿಸುವಂತೆ ಮುಖ್ಯಮಂತ್ರಿಯವರು ಸೂಚಿಸಿದರು.
ಸಭೆಯ ನಂತರ ಕನ್ನಡಪ್ರಭದೊಂದಿಗೆ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹೇಶ್ ಜೋಶಿ, ಈ ಬಾರಿಯ ಸಾಹಿತ್ಯ ಸಮ್ಮೇಳನವನ್ನು ಸಾಹಿತ್ಯ ಕ್ಷೇತ್ರದ ಸಾಧಕರ ಸಮ್ಮೇಳವನ್ನಾಗಿ ಆಯೋಜಿಸಲು ತೀರ್ಮಾನಿಸಲಾಗಿದೆ. ಈ ಬಾರಿ 87ನೇ ವರ್ಷದ ಸಾಹಿತ್ಯ ಹಬ್ಬ ನಡೆಯುತ್ತಿರುವುದರಿಂದ 87 ಮಂದಿ ಸಾಧಕರಿಗೆ ಸನ್ಮಾನ ಮಾಡಲಾಗುವುದು ಎಂದು ಹೇಳಿದರು.ಸಮ್ಮೇಳನಾಧ್ಯಕ್ಷರನ್ನು ಆಯ್ಕೆ ಮಾಡುವಾಗ ಹಿರಿಯರು, ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಕೆಲಸ ಮಾಡಿದವರನ್ನು ಪರಿಗಣಿಸಬೇಕು. ಸಮ್ಮೇಳನಕ್ಕೆ ಅಗತ್ಯವಾದ ಎಲ್ಲ ಸಹಕಾರವನ್ನು ರಾಜ್ಯ ಸರ್ಕಾರ ಒದಗಿಸಲಿದೆ ಎಂದು ಭರವಸೆ ನೀಡಿದರು. ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಶಾಸಕ ಪಿ.ಎಂ ನರೇಂದ್ರಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ, ನಿರ್ದೇಶಕಿ ಧರಣಿದೇವಿ ಮಾಲಗತ್ತಿ ಉಪಸ್ಥಿತರಿದ್ದರು.ಸಭೆಯ ನಂತರ ಕನ್ನಡಪ್ರಭದೊಂದಿಗೆ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹೇಶ್ ಜೋಶಿ, ಈ ಬಾರಿಯ ಸಾಹಿತ್ಯ ಸಮ್ಮೇಳನವನ್ನು ಸಾಹಿತ್ಯ ಕ್ಷೇತ್ರದ ಸಾಧಕರ ಸಮ್ಮೇಳವನ್ನಾಗಿ ಆಯೋಜಿಸಲು ತೀರ್ಮಾನಿಸಲಾಗಿದೆ. ಈ ಬಾರಿ 87ನೇ ವರ್ಷದ ಸಾಹಿತ್ಯ ಹಬ್ಬ ನಡೆಯುತ್ತಿರುವುದರಿಂದ 87 ಮಂದಿ ಸಾಧಕರಿಗೆ ಸನ್ಮಾನ ಮಾಡಲಾಗುವುದು ಎಂದು ಹೇಳಿದರು.
ಸಮ್ಮೇಳನಕ್ಕಾಗಿ 30 ಕೋಟಿ ರು.ಗಳ ಅನುದಾನ ಒದಗಿಸಲು ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು. 2023ರ ನವೆಂಬರ್ ಅಥವಾ ಡಿಸೆಂಬರ್‌ನಲ್ಲಿಯೇ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಬೇಕೆಂಬ ಉದ್ದೇಶ ಹೊಂದಲಾಗಿತ್ತು. ಆದರೆ, ರಾಜ್ಯದಲ್ಲಿ ಬರಗಾಲ ಇರುವ ಹಿನ್ನೆಲೆಯಲ್ಲಿ ಸಮ್ಮೇಳನ ಮುಂದೂಡಲಾಗಿತ್ತು.