ರಾಮನಗರ: ಸುದ್ದಿಗೆ ಸೀಮಿತವಾಗದೆ ಸಮಾಜ ಸುಧಾರಣೆ ಹಾಗೂ ರಚನಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ಮಾಧ್ಯಮ ಲೋಕಕ್ಕೆ ಮಾದರಿ ಎಂದು ಶಾಸಕ ಇಕ್ಬಾಲ್ ಹುಸೇನ್ ಮೆಚ್ಚುಗೆ ವ್ಯಕ್ತಪಡಿಸಿದರು
ರಾಮನಗರ: ಸುದ್ದಿಗೆ ಸೀಮಿತವಾಗದೆ ಸಮಾಜ ಸುಧಾರಣೆ ಹಾಗೂ ರಚನಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ಮಾಧ್ಯಮ ಲೋಕಕ್ಕೆ ಮಾದರಿ ಎಂದು ಶಾಸಕ ಇಕ್ಬಾಲ್ ಹುಸೇನ್ ಮೆಚ್ಚುಗೆ ವ್ಯಕ್ತಪಡಿಸಿದರು.
ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್, ಕನ್ನಡಪ್ರಭ ಹಾಗೂ ಇಂಡ್ ವೇಲ್ಸ್ ಇನೋವೇಶನ್ಸ್ ಪ್ರೈವೆಟ್ ಲಿಮಿಟೆಡ್ ಆಯೋಜಿಸಿದ್ದ ಮೂರು ದಿನಗಳ ರಾಮನಗರ ಸಂಭ್ರಮ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಸಾಕಷ್ಟು ಸುದ್ದಿ ವಾಹಿನಿಗಳು ಮತ್ತು ದಿನಪತ್ರಿಕೆಗಳು ಕೇವಲ ಸುದ್ದಿಗಷ್ಟೇ ಸೀಮಿತವಾಗಿರುತ್ತವೆ. ಆದರೆ, ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ಸಾಧಕರನ್ನು ಗುರುತಿಸುವ ಜೊತೆಗೆ ಎಲ್ಲ ವಯೋಮಾನದವರಿಗೆ ಸ್ಪರ್ಧೆಗಳನ್ನು ಆಯೋಜಿಸಿ ರಾಮನಗರ ಸಂಭ್ರಮ ವೇದಿಕೆ ಕಲ್ಪಿಸಿದ್ದಾರೆ ಎಂದು ಹೇಳಿದರು.ಈ ವೇಳೆ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಯರೇಹಳ್ಳಿ ಮಂಜು, ಬಿಡದಿ ಪುರಸಭೆ ವಿಪಕ್ಷ ನಾಯಕ ಸಿ.ಉಮೇಶ್ ಮಾತನಾಡಿದರು. ವಿವಿಧ ಕ್ಷೇತ್ರಗಳ ಸಾಧಕರಾದ ಪರಿಸರ ಪ್ರೇಮಿ ಸಾಲುಮರದ ನಿಂಗಣ್ಣ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಗಳಿಸಿದ ಅಲ್ಫಿಯಾ ನೂರೈನ್ , ಸಮಾಜ ಸೇವೆ ಕ್ಷೇತ್ರದಿಂದ ಆಶಾ ಹಾಗೂ ರೈತ ಮಹಿಳೆ ಶಾಂತಮ್ಮ ಅವರನ್ನು ಸನ್ಮಾನಿಸಲಾಯಿತು.
15ಕೆಆರ್ ಎಂಎನ್ 1.ಜೆಪಿಜಿರಾಮನಗರ ಸಂಭ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಶಾಸಕ ಇಕ್ಬಾಲ್ ಹುಸೇನ್ ಸನ್ಮಾನಿಸಿದರು.