ಸಾರಾಂಶ
ಟಿಪ್ಪು ಯೂತ್ ಸೋಶಿಯಲ್ ವರ್ಕರ್ಸ್ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ಟಿಪ್ಪು ಜಯಂತಿ ಕಾರ್ಯಕ್ರಮ ಜರುಗಿತು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ತಾಲೂಕು ಘಟಕ, ಸ್ವಯಂಪ್ರೇರಿತ ರಕ್ತ ಕೇಂದ್ರ ಮತ್ತು ರೋಟರಿ ಕ್ಲಬ್ ಚನ್ನರಾಯಪಟ್ಟಣ ವಿನ್ ಸಹಯೋಗದೊಂದಿಗೆ ಸಾರ್ವಜನಿಕರಿಗೆ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. 154ಕ್ಕೂ ಹೆಚ್ಚು ಸಾರ್ವಜನಿಕರಿಗೆ ಕಣ್ಣಿನ ತಪಾಸಣೆ ಹಾಗೂ ಹೃದಯ ತಪಾಸಣೆ ನಡೆಸಲಾಯಿತು.
ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ಟಿಪ್ಪು ಯೂತ್ ಸೋಶಿಯಲ್ ವರ್ಕರ್ಸ್ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ಟಿಪ್ಪು ಜಯಂತಿ ಕಾರ್ಯಕ್ರಮ ಜರುಗಿತು.ಭಾರತೀಯ ರೆಡ್ ಕ್ರಾಸ್ ಸಂಸ್ಥೆ ತಾಲೂಕು ಘಟಕ, ಸ್ವಯಂಪ್ರೇರಿತ ರಕ್ತ ಕೇಂದ್ರ ಮತ್ತು ರೋಟರಿ ಕ್ಲಬ್ ಚನ್ನರಾಯಪಟ್ಟಣ ವಿನ್ ಸಹಯೋಗದೊಂದಿಗೆ ಸಾರ್ವಜನಿಕರಿಗೆ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಡಾ. ರಾಜೇಶ್ ಹಾಗೂ ಭರತ್ ಕುಮಾರ್ ಎಚ್ ಜಿ ಚೇರ್ಮನ್ ತಾಲೂಕು ಘಟಕ ಚನ್ನರಾಯಪಟ್ಟಣ, ಮತ್ತು ಡಾ. ಶಾಬಾಜ್, ರವರು ಹಾಗೂ ಟಿಪ್ಪು ಯೂತ್ ಸೋಶಿಯಲ್ ವರ್ಕರ್ ಸಂಘದ ಅಧ್ಯಕ್ಷರಾದ ಇರ್ಫಾನ್ ಹಾಗೂ ಸಂಘದ ಮುಖ್ಯಸ್ಥರದ ನಾಸಿರ್ ಹಾಗೂ ಹಲವು ಗಣ್ಯರು ಉದ್ಘಾಟಿಸಿದರು.
ಕಾರ್ಯಕ್ರಮವನ್ನು ಕುರಿತು ಮಾತನಾಡಿದ ಭರತ್ ಕುಮಾರ್ ಎಚ್ ಜಿ ರವರು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ತಾಲೂಕು ಘಟಕ ಚನ್ನರಾಯಪಟ್ಟಣ ಇವರ ವತಿಯಿಂದ ಇಂದು 154ಕ್ಕೂ ಹೆಚ್ಚು ಸಾರ್ವಜನಿಕರಿಗೆ ಕಣ್ಣಿನ ತಪಾಸಣೆ ಹಾಗೂ ಹೃದಯ ತಪಾಸಣೆ ನಡೆಸಲಾಯಿತು ಮತ್ತು ರಕ್ತದ ಒತ್ತಡ ಹಾಗೂ ಸಕ್ಕರೆ ಕಾಯಿಲೆ ಹಾಗೂ ಇನ್ನಿತರೆ ಕಾಯಿಲೆಗಳಿಗೆ ಸಂಬಂಧಿಸಿದಂತೆ ಉಚಿತವಾಗಿ ಔಷಧಿಯನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ 40 ರಕ್ತದಾನಿಗಳು ರಕ್ತದಾನ ಮಾಡಿದರು.