ನ.9 ರಂದು ನಿಜಲಿಂಗಪ್ಪ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

| Published : Nov 06 2024, 11:49 PM IST

ಸಾರಾಂಶ

Kannada Rajyotsava at Nijalingappa School on Nov. 9

- ಎಸ್.ನಿಜಲಿಂಗಪ್ಪ ಶಿಕ್ಷಣ ಸಂಸ್ಥೆಯಲ್ಲಿ ಕಾರ್ಯದರ್ಶಿ ಕೆ.ಎಸ್.ಕಲ್ಮಠ್ ಮಾಹಿತಿ

-----

ಕನ್ನಡಪ್ರಭ ವಾರ್ತೆ ಹೊಸದುರ್ಗ

ನ.9ರಂದು ಸಂಜೆ 6.30 ಕ್ಕೆ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಎಸ್.ನಿಜಲಿಂಗಪ್ಪ ಶಿಕ್ಷಣ ಸಂಸ್ಥೆ ವತಿಯಿಂದ ಅಶೋಕ ರಂಗಮಂದಿರ ದಲ್ಲಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಕೆ.ಎಸ್.ಕಲ್ಮಠ್ ಹೇಳಿದರು. ಎಸ್.ನಿಜಲಿಂಗಪ್ಪ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಅಂದು ಬೆಳಗ್ಗೆ 11ಕ್ಕೆ 2 ಸಾವಿರ ಶಾಲಾ ವಿದ್ಯಾರ್ಥಿಗಳಿಂದ ಪಟ್ಟಣದ ಮುಖ್ಯ ರಸ್ತೆಯಲ್ಲಿ ಸಾಂಸ್ಕೃತಿಕ ಜಾಥ ನಡೆಯಲಿದ್ದು, ಕನ್ನಡದ 2 ಜನಪ್ರಿಯ ಹಾಡುಗಳಿಗೆ ನೃತ್ಯದ ಮೂಲಕ ಮಕ್ಕಳು ಸಾರ್ವಜನಿಕರಲ್ಲಿ ಕನ್ನಡದ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ. ಶಿಕ್ಷಣ ಸಂಸ್ಥೆಯು ಆಂಗ್ಲ ಮಾಧ್ಯಮ ಶಾಲೆಯಾದರೂ ಕನ್ನಡ ಭಾಷೆಯನ್ನು ಎಂದೂ ನಿರ್ಲಕ್ಷಿಸಿಲ್ಲ. ಪ್ರತಿ ಶನಿವಾರದಂದು ಕನ್ನಡ ಭಾಷೆ ಕುರಿತಾಗಿ ಚಟುವಟಿಕೆಗಳನ್ನು ಆಯೋಜಿಸಿ ಕನ್ನಡ ಭಾಷೆಯಲ್ಲಿ ಪ್ರಬುದ್ಧತೆ ಬೆಳೆಸುತ್ತಿದ್ದೇವೆ ಎಂದರು.

ಅಂದು ಸಂಜೆಯ ಕಾರ್ಯಕ್ರಮದಲ್ಲಿ ಕನ್ನಡ ಸಂಸ್ಕೃತಿ ಚಿಂತಕ ಹಿರೇಮಗಳೂರು ಕಣ್ಣನ್, ಉಪನ್ಯಾಸಕಿ ನಾಗಶ್ರೀ ತ್ಯಾಗರಾಜ ಅವರು ಉಪನ್ಯಾಸ ನೀಡುವರು. ಎಸ್.ನಿಜಲಿಂಗಪ್ಪ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಂ.ಶಿವಲಿಂಗಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಇದೇ ಸಂದರ್ಭದಲ್ಲಿ ವಯೋಸಹಜ ನಿಧನರಾದ ಹಿರಿಯ ಪತ್ರಕರ್ತ ಸಂಜೀವಮೂರ್ತಿ ಅವರ ಕುರಿತಾಗಿ ನುಡಿನಮನ ಆಯೋಜಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.

ಈ ವೇಳೆ ಎಸ್.ನಿಜಲಿಂಗಪ್ಪ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಂ.ಶಿವಲಿಂಗಪ್ಪ, ಅಕಾಡೆಮಿ ನಿರ್ದೇಶಕ ಎಂ.ಬಿ.ತಿಪ್ಪೇಸ್ವಾಮಿ, ನಿರ್ದೇಶಕ ಸಿದ್ದರಾಮಣ್ಣ, ಪ್ರಾಂಶುಪಾಲ ಟಿ.ಬಸಪ್ಪ ಇದ್ದರು.

------

ಫೋಟೋ: ಹೊಸದುರ್ಗದಲ್ಲಿ ನಡೆದ ಸುದ್ದಿಗೋಷ್ಠಿ ಯಲ್ಲಿ ಕಲ್ಮಠ್‌ ಅವರು ಕನ್ನಡ ರಾಜ್ಯೋತ್ಸವ ಕುರಿತು ಮಾತನಾಡಿದರು

----

5ಎಚ್.ಎಸ್.ಡಿ3