ಕರ್ನಾಟಕ ರಕ್ಷಣಾ ವೇದಿಕೆ (ಕ.ರ.ವೇ) ಸ್ವಾಭಿಮಾನಿ ಬಣದ ಕೊಡಗು ಜಿಲ್ಲಾ ಘಟಕದ ವತಿಯಿಂದ ಪ್ರಥಮ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ಸಿದ್ದಾಪುರ ಬಸ್ ನಿಲ್ದಾಣದಲ್ಲಿ ಶುಕ್ರವಾರ ನಡೆಯಿತು.
ಸಿದ್ದಾಪುರ: ಕರ್ನಾಟಕ ರಕ್ಷಣಾ ವೇದಿಕೆ (ಕ.ರ.ವೇ) ಸ್ವಾಭಿಮಾನಿ ಬಣದ ಕೊಡಗು ಜಿಲ್ಲಾ ಘಟಕದ ವತಿಯಿಂದ ಪ್ರಥಮ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ಸಿದ್ದಾಪುರ ಬಸ್ ನಿಲ್ದಾಣದಲ್ಲಿ ಶುಕ್ರವಾರ ನಡೆಯಿತು.
ಕಾರ್ಯಕ್ರಮದಲ್ಲಿ ಸಂತ ಅನ್ನಮ್ಮ ಶಾಲೆ, ಶ್ರೀ ಕೃಷ್ಣ ವಿದ್ಯಾಮಂದಿರ, ಇಕ್ರಾ ಪಬ್ಲಿಕ್ ಶಾಲೆ, ಸಿದ್ದಾಪುರ ಪ್ರೌಢಶಾಲೆ, ಬಿ.ಜಿ.ಎಸ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಸಿದ್ದಾಪುರ ಪಟ್ಟಣದಲ್ಲಿ ಮೆರವಣಿಗೆ ನಡೆಸಿ, ಕನ್ನಡ ಅಭಿಮಾನ ಮೆರೆದರು. ಬಸ್ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಕನ್ನಡ ಭಾಷಣ ಮಾಡಿದರು. ಕನ್ನಡ ನಾಡು ನುಡಿಗಳ ಬಗ್ಗೆ ಅತಿಥಿಗಳು ಮಾತನಾಡಿದರು.ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್, ಸಿದ್ದಾಪುರ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸತೀಶ್, ಸಿದ್ದಾಪುರ ಆರೋಗ್ಯ ಕೇಂದ್ರದ ಆರೋಗ್ಯ ವೈದ್ಯಾಧಿಕಾರಿ ಡಾ.ರೇವಣ್ಣ, ಕ.ರ.ವೇ ಸ್ವಾಭಿಮಾನಿ ಬಣದ ಕೊಡಗು ಜಿಲ್ಲಾ ಉಸ್ತುವಾರಿ ಅಧ್ಯಕ್ಷರಾದ ತನು ಕಿಶೋರ್, ಜಿಲ್ಲಾ ಉಪಾಧ್ಯಕ್ಷ ಸಜಿಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ನೆಲ್ಲಿಕ್ಕಲ್, ಕುಶಾಲನಗರ ತಾಲೂಕು ಘಟಕದ ಅಧ್ಯಕ್ಷರಾದ ಹರೀಶ್, ವಿರಾಜಪೇಟೆ ತಾಲೂಕು ಘಟಕದ ಅಧ್ಯಕ್ಷ ಶಶಿಕುಮಾರ್, ಕಾರ್ಯದರ್ಶಿ ದಿನೇಶ್, ಮಡಿಕೇರಿ ತಾಲೂಕು ಕಾರ್ಮಿಕ ಘಟಕದ ಅಧ್ಯಕ್ಷರಾದ ವೆಂಕಟೇಶ್, ನೆಲ್ಯಹುದಿಕೇರಿ ಘಟಕದ ಅಧ್ಯಕ್ಷ ಗಿರೀಶ್, ಗುರುಪ್ರಸಾದ್ ಸೇರಿದಂತೆ ಇನ್ನಿತರರು ಇದ್ದರು.