ಬೆಂ.ಗ್ರಾ ಜಿಲ್ಲಾಡಳಿತ ಭವನ ಆವರಣದಲ್ಲಿ ಕನ್ನಡ ರಾಜ್ಯೋತ್ಸವ

| Published : Nov 02 2025, 02:15 AM IST

ಸಾರಾಂಶ

ದೊಡ್ಡಬಳ್ಳಾಪುರ: 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ತ್ರಿವರ್ಣ ಧ್ವಜಕ್ಕೆ ಗೌರವ ವಂದನೆ ಸಲ್ಲಿಸಿ ಕನ್ನಡಾಂಬೆ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪ ಮನಮನ ಸಲ್ಲಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡುವ ಪ್ರಚಾರ ವಾಹನಕ್ಕೆ ಜಿಲ್ಲಾಧಿಕಾರಿ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಿವಕುಮಾರ್, ಯೋಜನಾ ಅಧಿಕಾರಿ ರಾಮಕೃಷ್ಣಯ್ಯ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

1ಕೆಡಿಬಿಪಿ8-

ಬೆಂ.ಗ್ರಾ ಜಿಲ್ಲಾಡಳಿತ ಭವನದ ಆವರಣದಲ್ಲಿ ಶನಿವಾರ ಕನ್ನಡ ರಾಜ್ಯೋತ್ಸವ ಹಿನ್ನಲೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಧ್ವಜಾರೋಹಣ ನೆರವೇರಿಸಿದರು.